ಲೇಖನಗಳು

ಸಂವಿಧಾನದ ಅಸ್ತಿತ್ವ ಮತ್ತು ಅನುಷ್ಠಾನಕ್ಕೆ ಅಡಿಗಲ್ಲಾದ ಅಂಬೇಡ್ಕರ್ ಮತ್ತು ವಾಸ್ತವ

ಸಂವಿಧಾನದ ಅಸ್ತಿತ್ವ ಮತ್ತು ಅನುಷ್ಠಾನಕ್ಕೆ ಅಡಿಗಲ್ಲಾದ ಅಂಬೇಡ್ಕರ್ ಮತ್ತು ವಾಸ್ತವ

            ವೈವಿಧ್ಯಮಯ ಗುಣ ಸ್ವಭಾವದ ಮತ್ತು ಬೌದ್ದಿಕ ಗುಣಮಟ್ಟದ ಭಿನ್ನತೆಯನ್ನು ಹೊಂದಿದ ಜನರನ್ನು ಒಂದು ನಿರ್ದಿಷ್ಟ ಕಾರ್ಯ ಸಾಧನೆಯ ಕಡೆಗೆ ಮುನ್ನಡೆಸಿಕೊಂಡು ಹೋಗಿ ಸಮಸ್ತರಿಗೂ ನ್ಯಾಯ ದೊರಕಿಸಿಕೊಡಲು ಒಬ್ಬ ನಾಯಕ ಅಥವಾ ಯಜಮಾನ ಬೇಕೆ ಬೇಕು. ಆತನು ಪರಿಣಾಮಕಾರಿಯಾದ ಈ ಕಾರ್ಯದ ಮೂಲಕ ಎಲ್ಲರ ಹಿತ ಕಾಯಬೇಕಾದರೆ ಎಲ್ಲರನ್ನೂ ಸಂತೃಪ್ತಿಪಡಿಸಲು ಮತ್ತು ಕಾರ್ಯ ಸುಗಮವಾಗಿ ಸಾಗಲು ಕೆಲವು ರೀತಿ. ನೀತಿ ಹಾಗೂ ನಿಯಮಗಳನ್ನು ಜಾರಿಗೆ ತರಲೇಬೇಕಾಗುತ್ತದೆ ಮತ್ತು ಉಳಿದವರು ಅವುಗಳ ಪಾಲನೆ ಮಾಡಲೇಬೇಕಾಗುತ್ತದೆ. ಹೀಗೆ ಒಂದು ಕಾರ್ಯವನ್ನು ಸುಲಲಿತವಾಗಿ ಪರಿಣಾಮಕಾರಿಯಾದ ಫಲಿತಾಂಶವನ್ನು ಪಡೆಯಲು ಮಾಡಿದ ಕಾನೂನುಗಳ ಒಟ್ಟು ಸ್ವರೂಪವನ್ನು ಸಂವಿಧಾನ ಎಂದು ಕರೆಯುತ್ತಾರೆ. ಅಂದರೆ ಕೂಡಿ ಬಾಳುವಾಗ ಪ್ರತಿಯೊಬ್ಬರು ಏನು ಮಾಡಬೇಕು ? ಏನು ಮಾಡಬಾರದು. ಎಂಬುದನ್ನು ತಿಳಿಸಲು ಮತ್ತು ಅನುಸ್ಥಾನಗೊಳಿಸಲು ಸಂವಿಧಾನದ ಅಗತ್ಯವಿದೆ.  ಇದೆ ಹಿನ್ನಲೆಯಲ್ಲಿ ಭಾರತ ದೇಶದಲ್ಲಿ ಆಂಗ್ಲರು ಆಡಳಿತ ಮಾಡಿದ ಕೊನೆ ಘಳಿಗೆಯಲ್ಲಿ ಅಂದರೆ ದೇಶಕ್ಕೆ ಸ್ವಾತಂತ್ರ್ಯ ನೀಡುವ ಮುಂಚೆ ಈ ದೇಶದ ಪ್ರಮುಖರಿಗೆ ಕೆಲವು ಸಲಹೆ ಸೂಚನೆಗಳನ್ನು ನೀಡಿದರು ಅವುಗಳನ್ನು ಜಾರಿಗೆ ತರಿಸಲು ಸಹಕಾರವನ್ನು ಮಾಡಿದರು.  

ಅದು 1945 ರ ಸಮಯ ಎರಡನೇ ಮಹಾಯುದ್ಧ ಮುಗಿದು ಭಾರತಕ್ಕೆ ಸ್ವಾತಂತ್ರ್ಯ ಲಭಿಸುವ ಸಮಯವಾಗಿತ್ತು. ಮತ್ತು ಭಾರತೀಯರಲ್ಲೂ ಆ ತುಡಿತ ನೂರು ಪಟ್ಟಾಗಿತ್ತು. ಅದಾಗಲೆ ಭಾರತೀಯರಿಗೆ ಸ್ವಾತಂತ್ರ್ಯದ ಪ್ರಶ್ನೆ ಉದ್ಭವಿಸಿತು. ಇದನ್ನರಿತ ಬ್ರಿಟೀಷರು ಇದಕ್ಕೆ  ಸೂಕ್ತ ಪರಿಹಾರ ಸೂಚಿಸಲು ಮತ್ತು ಭಾರತಕ್ಕೆ ಉತ್ತಮ ಆಡಳಿತದ ಮಾರ್ಗದರ್ಶನ ಮಾಡಲು ಮೂರು ಜನ ಸದಸ್ಯರನ್ನೊಳಗೊಂಡ ಒಂದು ಸಮಿತಿಯನ್ನು ಭಾರತಕ್ಕೆ ಕಳುಹಿಸಿಕೊಟ್ಟು ಭಾರತಕ್ಕೆ ತನ್ನದೆ ಆದ ಸಂವಿಧಾನ ಎಷ್ಟು ಮುಖ್ಯ ಎಂಬುದನ್ನು ಮನವರಿಕೆ ಮಾಡಿಸಿದರು. ಆ ಸಮಿತಿಯ ಹೆಸರು ‘ಕ್ಯಾಬಿನೆಟ್ ಮಿಷನ್ ಆಯೋಗ’. ಎಂದಾಗಿತ್ತು. ಸದರಿ ಆಯೋಗವು 1946 ಮಾರ್ಚ್‌ 16 ರಂದು ‘ಭವಿಷ್ಯದ ಭಾರತದ ಸರ್ಕಾರಕ್ಕಾಗಿ ಒಂದು ಸಂವಿಧಾನ ರಚಿಸಲು ಸಂವಿಧಾನ ಸಭೆಯೊಂದನ್ನು ರಚಿಸುವ ಅಗತ್ಯವಿದೆ’ ಎಂದು ಘೋಷಿಸಿತು. ಅಷ್ಟೇ ಅಲ್ಲದೆ ಆ ಸಭೆ ಪ್ರಜಾಸತ್ತಾತ್ಮಕವಾಗಿರಬೇಕೆಂಬ ನಿಟ್ಟಿನಲ್ಲಿ ವಿವಿಧ ಪ್ರಾಂತ್ಯಗಳ ಅಸೆಂಬ್ಲಿಗಳ ಮೂಲಕ ಸದಸ್ಯರನ್ನು ಆರಿಸಲಾಯಿತು. ಅಂದಹಾಗೆ ಆ ಸಭೆಗೆ ಭಾರತದ ಪಶ್ಚಿಮದ ತುದಿ ಬಾಂಬೆ ಪ್ರಾಂತ್ಯದಿಂದ ಸ್ಪರ್ಧಿಸಿದ್ದ ಅಂಬೇಡ್ಕರರು ಕಾಂಗ್ರೆಸ್ಸಿನ ಅವಿಚ್ಛಿನ್ನ ವಿರೋಧದಿಂದ ಸೋಲಬೇಕಾಯಿತು. ಆದರೂ, ಎದೆಗುಂದದೆ ಪೂರ್ವದ ದೂರದ ಬಂಗಾಳದಿಂದ ಅಲ್ಲಿಯ ಪರಿಶಿಷ್ಟ ಜಾತಿಯ ನಾಯಕ ಜೋಗೇಂದ್ರನಾಥ ಮಂಡಲ್ರ ಬೆಂಬಲದ ಮೂಲಕ ಅವರು ಸಂವಿಧಾನ ಸಭೆಗೆ ಆರಿಸಿಬರುವಲ್ಲಿ ಸಫಲರಾರದು. ಒಟ್ಟಾರೆ 296 ಸದಸ್ಯ ಬಲದ ಮೂಲಕ ಸಂವಿಧಾನ ಸಭೆ ತನ್ನ ಪ್ರಥಮ ಸಭೆಯನ್ನು 1946 ಡಿಸೆಂಬರ್ 6ರ ಬೆಳಿಗ್ಗೆ 11ಗಂಟೆಗೆ ನವದೆಹಲಿಯ ಕಾನ್ಸ್ಟಿಟ್ಯೂಶನ್ ಹಾಲ್ನಲ್ಲಿ ಆರಂಭಿಸಿತು. ಈ ಸಭೆ ಆರಂಭವಾದಾಗ ಒಟ್ಟು 296 ಸದಸ್ಯರಲ್ಲಿ  207 ಮಂದಿಯಷ್ಟೆ.

        ಭಾಗವಹಿಸಿದ್ದರು. ಇನ್ನುಳಿದವರು ಅಂದಿನ ಮುಸ್ಲಿಂಲೀಗ್ಗೆ ಸೇರಿದವರಾಗಿದ್ದು ಪ್ರತ್ಯೇಕ ರಾಷ್ಟ್ರಕ್ಕಾಗಿ ಒತ್ತಾಯಿಸಿ ಅವರೆಲ್ಲ ಗೈರುಹಾಜರಾಗಿದ್ದರು. ಹೀಗಿದ್ದರೂ ಪಂಡಿತ್ ಜವಹರಲಾಲ್ ನೆಹರೂ ಭಾರತ ಸಾರ್ವಭೌಮ ಸ್ವತಂತ್ರ ಗಣರಾಜ್ಯವಾಗಲು ತನ್ನ ಭವಿಷ್ಯದ ಸರ್ಕಾರಕ್ಕಾಗಿ ಅದು ತನ್ನದೇ ಆದಂತಹ ಸಂವಿಧಾನವೊಂದನ್ನು ಹೊಂದುವುದನ್ನು ಬಯಸುತ್ತದೆ ಎಂದು ಗೊತ್ತುವಳಿಯೊಂದನ್ನು ಮಂಡಿಸಿದರು. ಆದರೆ ಸದಸ್ಯರಾದ ಎಂ.ಆರ್‌.ಜಯಕರ್ ಸಭೆಗೆ ಮುಸ್ಲಿಂ ಲೀಗ್ ಮತ್ತು ಇತರೆ ರಾಜ ಸಂಸ್ಥಾನಗಳ ಸದಸ್ಯರು ಗೈರುಹಾಜರಾಗಿರುವುದರಿಂದ ಅವರೆಲ್ಲ ಭಾಗವಹಿಸುವಂತಾಗಲು ಈ ಸಭೆಯನ್ನು ಮುಂದೂಡಬೇಕು ಎಂದು ತಮ್ಮ ಆಕ್ಷೇಪ ವ್ಯಕ್ತಪಡಿಸಿದರು ಮತ್ತು ನೆಹರೂರವರು ಮಂಡಿಸಿದ್ದ ಆ ಗೊತ್ತುವಳಿಯ ಚರ್ಚೆಯನ್ನು ಮುಂದೂಡಲು ಸಭೆಯ ಕಲಾಪಕ್ಕೆ ತಿದ್ದುಪಡಿಯೊಂದನ್ನು ಮಂಡಿಸಿದರು. ಆದರೆ ಗೌರವಾನ್ವಿತ ಸದಸ್ಯರ ಇಂತಹ ಆಕ್ಷೇಪ ಸಭೆಯಲ್ಲಿ ಅಲ್ಲೋಲ ಕಲ್ಲೋಲ ಉಂಟುಮಾಡಿತು. ಆಶ್ಚರ್ಯವೆಂದರೆ ಈ ಸಮಯದಲ್ಲಿ ಇಂತಹ ಅನೀರೀಕ್ಷಿತ ಕೋಲಾಹಲದ ನಡುವೆ ಮುಂದುವರಿದ ಸಭೆಯಲ್ಲಿ ಸಭೆಯ ಅಧ್ಯಕ್ಷರಾದ ಡಾ.ಬಾಬು ರಾಜೇಂದ್ರ​‍್ರಸಾದ್ರವರು ಡಿಸೆಂಬರ್ 17ರಂದು  ಡಾ.ಅಂಬೇಡ್ಕರರನ್ನು ಸಭೆಯನ್ನುದೇಶಿಸಿ ಮಾತನಾಡಲು ಆಹ್ವಾನಿಸಿದರು.

               ಇಂತಹ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಅಂಬೇಡ್ಕರರು  ಯಾವ ಸಂವಿಧಾನ ಸಭೆ ನಿಂತುಹೋಗಬೇಕಿತ್ತೋ, ಅನಿರ್ದಿಷ್ಟ ಅವಧಿಗೆ ಮುಂದೂಡಬೇಕಾಗಿತ್ತೋ ಅಂತಹ ಮುಖ್ಯವಾದ ಸಭೆಯನ್ನು  ಮುಂದುವರಿಯುವಂತೆ ಪ್ರಭಾವಿ ಭಾಷಣ ಮಾಡಿದರು. ಭಾರತದ ಸಂವಿಧಾನದ ಚಕ್ರ ಅಂಬೇಡ್ಕರರ ಮೂಲಕ ಉರುಳಲಾರಂಭಿಸಿತು! ಯಾಕೆಂದರೆ ತಮ್ಮ ಭಾಷಣದಲ್ಲಿ ಅಂಬೇಡ್ಕರರು ನೆಹರೂರವರು ಮಂಡಿಸಿದ್ದ ಗೊತ್ತುವಳಿಯ 8 ಅಂಶಗಳನ್ನು ಪದ ಪದವಾಗಿ, ಪದರು ಪದರಾಗಿ ಬಿಡಿಸಿ ವಿವರಿಸುತ್ತಾ ಸಂವಿಧಾನ ಎತ್ತ ಸಾಗಬೇಕು, ಹೇಗಿರಬೇಕು ಎಂದು ಜಗತ್ತಿನ ವಿವಿಧ ದೇಶಗಳ ವಿವಿಧ ರಾಷ್ಟ್ರಗಳ ಸಂವಿಧಾನಗಳನ್ನು ಉಲ್ಲೇಖಿಸುತ್ತಾ ಮಾರ್ಗ ತೋರಿಸಲಾಂಭಿಸಿದರು. ಸಭೆಯನ್ನು ಗಂಭೀರತೆಯೆಡೆಗೆ ತಂದರು. ಮುಸ್ಲಿಂಲೀಗ್ ಸದಸ್ಯರು ಗೈರಾಗಿದ್ದಕ್ಕೆ ಮುಂದಿನ ಸಭೆಯಲ್ಲಿ ಅವರು ಭಾಗವಹಿಸುತ್ತಾರೆ ಎಂಬ ಏಕತೆಯ ಆಶಾಭಾವ ವ್ಯಕ್ತಪಡಿಸುತ್ತಾ ಅಂಬೇಡ್ಕರರು “ವಿವಿಧ ಜಾತಿ-ಜನಾಂಗಗಳಾಗಿದ್ದಾಗ್ಯೂ ನಾವೆಲ್ಲಾ ಸದಾ ಒಂದಾಗಿರುವುದರಲ್ಲಿ ನನಗೆ ಯಾವ ಸಂಶಯವೂ ಇಲ್ಲ” ಎಂದರು.   

ಹೀಗೆ ತನ್ನ ಆರಂಭಿಕ ದಿನಗಳನ್ನು ಪ್ರಾರಂಭಿಸಿದ ಸಂವಿಧಾನ ಸಭೆ ಸರ್ದಾರ್ ಪಟೇಲರ ನೇತೃತ್ವದಲ್ಲಿ 1947 ಜನವರಿ 24 ರಂದು ಅಂಬೇಡ್ಕರರನ್ನು ಒಳಗೊಂಡಂತೆ 50ಜನ ಸದಸ್ಯರ ಸಲಹಾ ಸಮಿತಿಯೊಂದನ್ನು ನೇಮಿಸಿತು. ಆ ಸಮಿತಿಯು ಇತರೆ 4 ಪ್ರಮುಖ ಉಪಸಮಿತಿಗಳನ್ನು ನಿಯುಕ್ತಿಗೊಳಿಸಿತು. ಅವುಗಳಲ್ಲಿ ಬಹುಮಖ್ಯವಾದವುಗಳೆಂದರೆ ಮೂಲಭೂತ ಹಕ್ಕುಗಳ ಉಪಸಮಿತಿ ಮತ್ತು ಅಲ್ಪಸಂಖ್ಯಾತರ ಉಪಸಮಿತಿ. ಅಂಬೇಡ್ಕರರು ಈ ಎರಡೂ ಪ್ರಮುಖ ಸಮಿತಿಗಳ ಸದಸ್ಯರಾದರು. ಮುಂದುವರಿದು ಸಭೆ ಇನ್ನೂ 3 ಕಾರ್ಯಾಚರಣಾ ಸಮಿತಿಗಳನ್ನು ರಚಿಸಿತು.   

ಅವುಗಳೆಂದರೆ  1.ಕೇಂದ್ರ ಅಧಿಕಾರ ಸಮಿತಿ . 2.ಕೇಂದ್ರ ಸಂವಿಧಾನ ಸಮಿತಿ 3.ಪ್ರಾಂತ್ಯಗಳ ಸಂವಿಧಾನ ಸಮಿತಿ.   

    ಇಲ್ಲಿಯೂ ಅಷ್ಟೆ ಅಂಬೇಡ್ಕರ್ ಕೇಂದ್ರ ಸಂವಿಧಾನ ಸಮಿತಿಯ ಸದಸ್ಯರಾದರು. ಹೀಗೆ ಅವರು ಪ್ರಮುಖ ಸಮಿತಿಗಳ ಸದಸ್ಯರಾಗುವುದಕ್ಕೆ ಕಾರಣವೂ ಇತ್ತು. ಯಾಕೆಂದರೆ ಮುಂದೆ ಸಂವಿಧಾನ ಅರ​‍್ಿಸುವ ಸಮಯದಲ್ಲಿ ಅವರೇ ಹೇಳಿಕೊಂಡಿರುವಂತೆ “ಪರಿಶಿಷ್ಟ ಜಾತಿಗಳ ಹಿತ ಕಾಯುವ ಮಹದಾಸೆ ಹೊತ್ತಷ್ಟೆ ತಾನು ಸಂವಿಧಾನ ಸಭೆಗೆ ಬಂದೆ...”. ಹೌದು, ಡಾ.ಅಂಬೇಡ್ಕರರು ಪರಿಶಿಷ್ಟರ ಹಿತ ಕಾಯುವ ನೆಪ ಮಾತ್ರಕ್ಕೆ ಬಂದರೂ ತಮಗರಿವಿಲ್ಲದಂತೆ ಅವರು ಇಡೀ ದೇಶದ ಸೇವೆಗೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು!  ಯಾವ ಪರಿ ಎಂದರೆ ಇಡೀ ಸಂವಿಧಾನ ರಚನಾ ಪ್ರಕ್ರಿಯೆಯಲ್ಲಿ ಸಕ್ರಿಯರಾಗುವ ಮಟ್ಟಿಗೆ.  ಅದೆಂತಹ ಸಕ್ರಿಯತೆಯೆಂದರೆ ಶತೃಗಳೂ ಮೆಚ್ಚಿ ಅಹುದಹುದು ಎನ್ನುವ ಮಟ್ಟಿಗೆ! ಏಕೆಂದರೆ ಸಂವಿಧಾನ ರಚನೆಯ ಇಂತಹ ಓಪಚಾರಿಕ ಪ್ರಕ್ರಿಯೆಗಳು ಪೂರ್ಣಗೊಂಡು ಸ್ವಾತಂತ್ರ್ಯದ ಸಮಯದಲ್ಲಿ ದೇಶ ವಿಭಜನೆಯ ಸಂದರ್ಭ ಬಂದಾಗ ಅಂಬೇಡ್ಕರರು ಗೆದ್ದಿದ್ದ ಬಂಗಾಳದ ಕ್ಷೇತ್ರ ಕಾಂಗ್ರೆಸ್ಸಿಗರ ತಂತ್ರದಿಂದಾಗಿ ಪೂರ್ವ ಪಾಕಿಸ್ತಾನಕ್ಕೆ ಸೇರಲ್ಪಟ್ಟು ಅವರ ಸದಸ್ಯತ್ವ ರದ್ದಾಯಿತು. ಸೋಜಿಗವೆಂದರೆ ಈ ಸಮಯದಲ್ಲಿ ಅಂಬೇಡ್ಕರರ ಸಂವಿಧಾನ ರಚನಾ ಚಾಕಚಕ್ಯತೆ ಕೆಲಸ ಮಾಡಿತು! ಹೇಗೆಂದರೆ ಸ್ವತಃ ಸಭೆಯ ಅಧ್ಯಕ್ಷರಾದ ಡಾ.ಬಾಬು ರಾಜೇಂದ್ರ​‍್ರಸಾದರು 1947 ಜೂನ್ 30 ರಂದು ಬಾಂಬೆ ಪ್ರಾಂತ್ಯದ ಅಂದಿನ ಪ್ರಧಾನಿ ಡಾ.ಬಿ.ಜಿ.ಖೇರ್ರವರಿಗೆ ಪತ್ರ ಬರೆದು “ಬೇರೆ ವಿಷಯಗಳೇನೆ ಇರಲಿ, ಸಂವಿಧಾನ ಸಭೆ ಮತ್ತದರ ವಿವಿಧ ಉಪಸಮಿತಿಗಳಲ್ಲಿ ಅಂಬೇಡ್ಕರರ ಕಾರ್ಯ ಎಂತಹ ಮಟ್ಟದ್ದೆಂದರೆ, ಖಂಡಿತ ಅವರ ಸೇವೆಯನ್ನು ನಾವು ಕಳೆದುಕೊಳ್ಳಬಾರದು. ಅದಕ್ಕಾಗಿ ಜುಲೈ 14ರ ಮುಂದಿನ ಸಭೆಯೊಳಗೆ ಅವರು ಇರಲೇಬೇಕು ಎಂದರು!  

ಹೌದು,  ಬಾಬಾಸಾಹೇಬರು ತಕ್ಷಣ ಮರು ಆಯ್ಕೆಯಾದರು. ಹಾಗೇ ಆಗಸ್ಟ್‌ 15ರಂದು ಭಾರತಕ್ಕೆ ಸ್ವಾತಂತ್ರ್ಯ ಕೂಡ ಸಿಕ್ಕಿತು ಮತ್ತು ಅವರು ಸ್ವತಂತ್ರ ಭಾರತದಲ್ಲಿ ನೆಹರೂ ಸಂಪುಟದಲ್ಲಿ ಕಾನೂನು ಸಚಿವರಾಗಿ ಕೂಡ ನೇಮಕಗೊಂಡರು. ಆಶ್ಚರ್ಯವೆಂದರೆ ಆಗಸ್ಟ್‌ 29ರಂದು ಮರು ಸಮಾವೇಶಗೊಂಡ ಸಂವಿಧಾನಸಭೆ ಡಾ.ಅಂಬೇಡ್ಕರರನ್ನು “ಸಂವಿಧಾನ ಪ್ರತಿ ರಚಿಸುವ ಸಮಿತಿ (ಜಡಿಚಿಜಿಣಟಿರ ಛಿಠಟಣಣಜಜ)”ಯ ಅಧ್ಯಕ್ಷರನ್ನಾಗಿಯೂ ಆರಿಸಿತು! ಜೊತೆಗೆ ಆರು ಮಂದಿ ಸದಸ್ಯರ ತಂಡ. ಒಟ್ಟಾರೆ ಸಂವಿಧಾನ ಸಭೆಯ ಇಂತಹ ನಡಾವಳಿಗಳ ಮೂಲಕ ಭಾರತದ ಭವಿಷ್ಯ ಬರೆವ ಕೆಲಸ ಬಾಬಾಸಾಹೇಬರ ಮುಡಿಗೇರಿತು.  ಸಂವಿಧಾನ ರಚನೆಯ ಜವಾಬ್ದಾರಿಯೇನೋ ಅಂಬೇಡ್ಕರರ ಮುಡಿಗೇರಿತು. ಆದರೆ ಆ ಜವಾಬ್ದಾರಿಯನ್ನು ಅವರು ನಿರ್ವಹಿಸಿದ ಪರಿ ಖಂಡಿತ, ಅಂಬೇಡ್ಕರರು ಮತ್ತವರ ಸಂವಿಧಾನ ಕಾರ್ಯಕ್ಷಮತೆಯ ಬಗ್ಗೆ ಸ್ವತಃ ಅವರು ಮತ್ತು ಇತರರು ಸಂವಿಧಾನ ಸಭೆಗಳಲ್ಲಿ ಮಾಡಿದ ಭಾಷಣಗಳಲ್ಲಿ ನಮಗೆ ಉಲ್ಲೇಖ ಸಿಗುತ್ತದೆ. 1948 ನವೆಂಬರ್ 25 ರಂದು ಡಾ.ಅಂಬೇಡ್ಕರರು ಸಂವಿಧಾನ ಸಮರ​‍್ಿಸುತ್ತಾ ಮಾಡಿದ ಅಂತಿಮ ಭಾಷಣವನ್ನು ಉಲ್ಲೇಖಿಸುವುದಾದರೆ “ಮಾನ್ಯರೆ, ಸಂವಿಧಾನ ಸಭೆಯ ಕಾರ್ಯಕಲಾಪದ ಬಗ್ಗೆ ಹಿನ್ನೋಟ ನೋಡುವುದಾದರೆ 1946 ಡಿಸೆಂಬರ್ 9ರಿಂದ ಇಲ್ಲಿಯವರೆಗೆ ಸಂವಿಧಾನ ಸಭೆ ಸಮಾವೇಶಗೊಂಡು 2 ವರ್ಷ, 11 ತಿಂಗಳು, 17ದಿನಗಳು ಕಳೆಯುತ್ತಿವೆ. ಇದುವರೆಗೆ ಸಭೆ 11 ಸಮಾವೇಶಗಳನ್ನು ನಡೆಸಿದೆ. ಈ 11 ಸಮಾವೇಶಗಳು 165 ದಿನಗಳನ್ನು ಬಳಸಿಕೊಂಡಿದೆ. ಈ 165 ದಿನಗಳಲ್ಲಿ 114 ದಿನಗಳನ್ನು ಸಭೆ ಕರಡು ಸಂವಿಧಾನವನ್ನು ಪರಿಗಣಿಸಲು ತೆಗೆದುಕೊಂಡಿದೆ.  ಇನ್ನು ಕರಡು ಸಮಿತಿ ಅಥವಾ ಸಂವಿಧಾನ ರಚನಾ ಸಮಿತಿಯ ಬಗ್ಗೆ ಹೇಳುವುದಾದರೆ 1947 ಆಗಸ್ಟ್‌ 29 ರಂದು ಅದನ್ನು ಆಯ್ಕೆಮಾಡಲಾಯಿತು ಮತ್ತು ಅದು ತನ್ನ ಪ್ರಥಮ ಸಭೆಯನ್ನು 30ನೇ ಆಗಸ್ಟ್‌ ರಂದು ನಡೆಸಿತು. ಆಗಸ್ಟ್‌ 30 (1947) ರಿಂದ ಇಲ್ಲಿಯವರೆಗೆ ಸಮಿತಿ 141 ದಿನಗಳು ಸಭೆ ನಡೆಸಿ ಒಟ್ಟು ಈ ಅವಧಿಯನ್ನು ಕರಡು ಸಂವಿಧಾನವನ್ನು ತಯಾರಿಸಲು ಬಳಸಿಕೊಂಡಿದೆ” ಹೀಗೆ ವಿವರಿಸುತ್ತಾ ಸಂವಿಧಾನ ರಚನೆಗೊಂಡ ಪರಿಪರಿಯ ವಿಚಾರವನ್ನು ಎಳೆ ಎಳೆಯಾಗಿ ಬಿಡಿಸಿಟ್ಟರು.  ಅಂದಹಾಗೆ ಬಾಬಾಸಾಹೇಬರ ನೇತೃತ್ವದ ಸಮಿತಿ ಸಿದ್ಧಪಡಿಸಿದ ಈ ಸಂವಿಧಾನ 1948 ಫೆಬ್ರವರಿ 26ರಂದು ಭಾರತ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಗೊಂಡಿತು ಮತ್ತು ಗೆಜೆಟ್ನಲ್ಲಿ ಪ್ರಕಟಗೊಂಡ ಸಂವಿಧಾನದ ಆ ಪ್ರತಿ ತನ್ನ ಆರಂಭದ ಪುಟದಲ್ಲಿ ರಚನಾ ಸಮಿತಿಯ ಅಧ್ಯಕ್ಷರಾದ ಅಂಬೇಡ್ಕರರು ಸಭೆಯ ಅಧ್ಯಕ್ಷರಿಗೆ ಬರೆದ ಪತ್ರವೊಂದನ್ನೂ ಕೂಡ ಒಳಗೊಂಡಿತ್ತು. ಆ ಪತ್ರದ ಪ್ರಾರಂಭದ ಒಕ್ಕಣೆಯಲ್ಲಿ ಹೀಗೆ ಉಲ್ಲೇಖಿಸಲಾಗಿತ್ತು.  “ಆಜಚಿಡಿ ಖಡಿ, ಓಟಿ ಛಜಚಿಟಜಿ ಠ ಣಜ ಆಡಿಚಿಜಿಣಟಿರ ಅಠಟಣಣಜಜ_ ಋ ಣಛಟಣ  ಜಡಿಜತಿಣ ಣಜ ಆಡಿಚಿಜಿಣ ಠ ಣಜ ಟಿಜತಿ ಅಠಣಣಣಣಠ ಠ  ಋಜಚಿ_ ಋ ಚಿತಜ ಛಜಜಟಿ ಚಿಣಣಠದಜಜ ಣಠ ರಟಿ ಣಜ ಆಡಿಚಿಜಿಣ_ ಙಠಢಿ ಣಡಿಣಟಥಿ,  ಃ.ಖ.ಂಒಃಇಆಏಂಖ.” (ಋಜ.  

 ಖಂಡಿತ, ಹೀಗೆ ಪುಟಪುಟವನ್ನೂ ಉಲ್ಲೇಖಿಸುವ ಅಗತ್ಯವಿಲ್ಲ. ಆದರೂ ಕೆಲವು ಕೋಮುವಾದಿ ಕಿತಾಪತಿಗಳಿಸ್ಕೋರ ಇದನ್ನು ಉಲ್ಲೆಖಿಸಬೇಕಿದೆ. ಅಲ್ಲದೆ ಮತ್ತೊಂದು ಅಂಶವನ್ನು ಇಲ್ಲಿ ದಾಖಲಿಸಬೇಕಿದೆ. ಅದೆಂದರೆ ಫೆಬ್ರವರಿ 26, 1948 ರಂದು ಗೆಜೆಟ್ನಲ್ಲಿ ಪ್ರಕಟಗೊಂಡ ಭಾರತ ಸಂವಿಧಾನದ ಕರಡು ಪ್ರತಿ ಅಂಬೇಡ್ಕರರು ವಯಕ್ತಿಕವಾಗಿ ಸಂವಿಧಾನ ಸಭೆಯ ಮೂಲಭೂತ ಹಕ್ಕುಗಳ ಸಮಿತಿಗೆ ತಮ್ಮ ಪಕ್ಷ ‘ಪರಿಶಿಷ್ಟ ಜಾತಿಗಳ ಒಕ್ಕೂಟ’ದ ಪರವಾಗಿ ಮಾರ್ಚ್‌ 15, 1947 ರಂದು ಸಲ್ಲಿಸಿದ ಮನವಿಯ ಡಿಟೋ ಕಾಪಿಯಂತೇ ಇದೆ ಎಂಬುದು! ಈ ನಿಟ್ಟಿನಲ್ಲಿ ಆಸಕ್ತರು ಅಂಬೇಡ್ಕರರ ಆ ಮನವಿಯನ್ನು ಅವರ ಬರಹಗಳು ಭಾಷಣಗಳ ಸಂಪುಟ 1ರಲ್ಲಿ ‘ರಾಜ್ಯಗಳು ಮತ್ತು ಅಲ್ಪಸಂಖ್ಯಾತರು’ ಎಂಬ ಶೀರ್ಷಿಕೆಯಲ್ಲಿ ಪ್ರಕಟಗೊಂಡಿರುವುದನ್ನು ಗಮನಿಸಬಹುದು. ಈ ಹಿನ್ನೆಲೆಯಲ್ಲಿ ಸ್ಪಷ್ಟವಾಗಿ ಹೇಳಬಹುದು ಭಾರತದ ಸಂವಿಧಾನ ಅಂಬೇಡ್ಕರರ ಮೆದುಳಿನ ಕೂಸು ಎಂದು.  ಪ್ರಶ್ನೆಯೇನೆಂದರೆ ಗೆಜೆಟ್ನಲ್ಲಿ ಪ್ರಕಟಗೊಂಡ ಸಂವಿಧಾನ ಫೆಬ್ರವರಿ 26, 1948 ರಂದೇ ಜಾರಿಯಾಯಿತೇ? ಖಂಡಿತ ಇಲ್ಲ.  ಯಾಕೆಂದರೆ ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ. ಈ ದಿಸೆಯಲ್ಲಿ ಪ್ರಜೆಗಳ ಪ್ರತಿನಿಧಿಗಳ ನಡುವೆ ಸಂವಿಧಾನ ಚರ್ಚೆಗೆ ಬರುವುದು ಬೇಡವೆ ? ಹೌದು, 15 ನವೆಂಬರ್ 1948ರಲ್ಲಿ ಅನುಚ್ಛೇದ 1ರಿಂದ ಪ್ರಾರಂಭಿಸಿ 17 ಅಕ್ಟೋಬರ್ 1949ರವರೆಗೆ ಕೊನೆಯ ಅನುಚ್ಛೇದ ಅಂದರೆ ಅನುಚ್ಛೇದ 395ರವರೆಗೆ ಸಂವಿಧಾನ ಸಭೆ ಇಡೀ ಕರಡು ಸಂವಿಧಾನದ ಬಗ್ಗೆ ಭರಪೂರ ಚರ್ಚೆ ನಡೆಸಿತು.   

ಈ ಇಷ್ಟೂ ದಿನಗಳಲ್ಲಿ ಪ್ರತಿಯೊಂದೂ ಅನುಚ್ಛೇದದ ಚರ್ಚೆಯಲ್ಲಿಯೂ ಸಕ್ರಿಯವಾಗಿ ಭಾಗವಹಿಸಿ ಅಂಬೇಡ್ಕರರು ಗೌರವಾನ್ವಿತ ಸದಸ್ಯರ ಪ್ರತಿಯೊಂದು ಸಲಹೆಗೂ ಕಿವಿಯಾದರು ಮತ್ತು ಸಂಬಂಧಪಟ್ಟ ಅನುಚ್ಛೇದದ ಪದಪದದ ವಿವರಣೆ ನೀಡಿ ಸದಸ್ಯರ ಸಲಹೆಗಳನ್ನು ಗೌರವಯುತವಾಗಿ ಸ್ವೀಕರಿಸಿ ಅಗತ್ಯ ತಿದ್ದುಪಡಿಗಳನ್ನು ಅಂಗೀಕರಿಸಿದರು. ಈ ಸಂಬಂಧ ಅಂಬೇಡ್ಕರರು ನೀಡಿರುವ ಮಾಹಿತಿಯನ್ನೇ ದಾಖಲಿಸುವುದಾದರೆ “ಕರಡು ಸಂವಿಧಾನಕ್ಕೆ ಸೂಚಿಸಲಾದ ಒಟ್ಟು ತಿದ್ದುಪಡಿಗಳು 7635. ಅವುಗಳಲ್ಲಿ ಅಂಗೀಕಾರಗೊಂಡಂತಹವು 2473”. ಒಟ್ಟಾರೆ ಇಂತೆಲ್ಲ ತಿದ್ದುಪಡಿಗಳ ನಂತರ 1949 ನವೆಂಬರ್ 17ರಂದು ಅಂತಿಮವಾಗಿ ಸಮಾವೇಶಗೊಂಡ ಸಂವಿಧಾನ ಸಭೆಯಲ್ಲಿ ಡಾ.ಅಂಬೇಡ್ಕರರು “ಅಧ್ಯಕ್ಷ ಮಹೋದಯರೇ, ಈ ಸಭೆ ಸ್ಥಿರೀಕರಿಸಿರುವ ಈ ಸಂವಿಧಾನವನ್ನು ಅಂಗೀಕರಿಸಬೇಕೆಂಬ ನಿರ್ಣಯವನ್ನು ನಾನು ಮಂಡಿಸುತ್ತೇನೆ” ಎನ್ನುತ್ತಿದ್ದಂತೆ ಇಡೀ ಸಭೆ ಹರ್ಷದ ಹೊನಲು ಹರಿಸಿ ಕರತಾಡನದೊಂದಿಗೆ ತನ್ನ ಒಪ್ಪಿಗೆ ಸೂಚಿಸಿತು. ಹಾಗೆಯೇ ಅಂಬೇಡ್ಕರರಿಗೆ ಅಭಿನಂದನೆಯ ಸುರಿಮಳೆಗಳು.

           ಅವುಗಳಲ್ಲಿ ಒಂದಷ್ಟನ್ನು ದಾಖಲಿಸುವುದಾದರೆ ಮದ್ರಾಸಿನ ಮುನಿಸ್ವಾಮಿ ಪಿಳ್ಳೈ ಎಂಬುವವರು “ಪರಿಶಿಷ್ಟ ಜಾತಿಯು ನಂದನಾರ್, ತಿರುಪಳನಾಳ್ವರ್, ತಿರುವಳ್ಳುವರ್ ಹೀಗೆ ಶ್ರೇಷ್ಠ ಸಂತರನ್ನು, ಜ್ಞಾನಿಗಳನ್ನು ನೀಡಿದೆ. ನಿಸ್ಸಂಶಯವಾಗಿ ಡಾ.ಅಂಬೇಡ್ಕರರು ಅಂತಹವರ ಸಾಲಿಗೆ ಸೇರೆ​‍್ಡಯಾಗುತ್ತಾರೆ. ಯಾಕೆಂದರೆ ಅವಕಾಶ ಸಿಕ್ಕರೆ ಪರಿಶಿಷ್ಟರು ಎಷ್ಟು ಎತ್ತರಕ್ಕೆ ಏರಬಲ್ಲರು ಎಂಬುದನ್ನು ಅಂಬೇಡ್ಕರರು ತಮ್ಮ ಈ ಸಾಧನೆಯ ಮೂಲಕ ಇಡೀ ಪ್ರಪಂಚಕ್ಕೆ ತೋರಿಸಿಕೊಟ್ಟಿದ್ದಾರೆ”. ಇನ್ನು ಸೇಠ್ ಗೋವಿಂದದಾಸ್ ಎನ್ನುವವರು “ಡಾ.ಅಂಬೇಡ್ಕರರನ್ನು ‘ವರ್ತಮಾನ ಕಾಲದ ಮನು’ ಎನ್ನಬಹುದು” ಎನ್ನುತ್ತಾರೆ ಎಂ.ಅನಂತಶಯನಂ ಅಯ್ಯಂಗಾರ್ ಎನ್ನುವವರಂತೂ “ಯಾವ ವ್ಯಕ್ತಿ ನಮ್ಮನ್ನು ಟೀಕಿಸುವ ಮತ್ತು ಅನುಮಾನದಿಂದ ನೋಡುವ ಉದ್ದೇಶದಿಂದ ಸಭೆಗೆ ಬಂದರೋ, ಕಡೆಗೆ ಅವರೇ ಸಂವಿಧಾನದ ಹೊಣೆ ಹೊತ್ತುಕೊಂಡರು ಮತ್ತು ಅದನ್ನು ರಚಿಸಿದರು” ಎಂದರು! ಹಾಗೆ ಪಂಡಿತ್ ಠಾಕೂರ್ ದಾಸ್ ಭಾರ್ಗವ ಎಂಬುವವರು ಮಾತನಾಡುತ್ತಾ “ಡಾ.ಅಂಬೇಡ್ಕರರು ನಮ್ಮ ಹೃದಯಗಳಲ್ಲಿ ಇಂದು ಉನ್ನತ ಸ್ಥಾನ ಅಲಂಕರಿಸಿದ್ದಾರೆ” ಎನ್ನುವ ಮೂಲಕ ತಮ್ಮ ಅಭೂತಪೂರ್ವ ಪ್ರೀತಿ ಮತ್ತು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದುವರಿದು ಮತ್ತೋರ್ವ ಸದಸ್ಯರಾದ ಟಿ.ಪ್ರಕಾಶಂ‘”ತಮ್ಮ ಈ ಕಾರ್ಯದ ಮೂಲಕ ಡಾ.ಅಂಬೇಡ್ಕರರು ತಾವು ಗ್ರೇಟ್ ಬ್ರಿಟನ್ನಿನ ರಾಜನ ಸಲಹೆಗಾರನಾಗಿ ಅಲ್ಲಿಯ ಆಸ್ಥಾನ ವಾೂಲ್ಸ್ಯಕ್ನಲ್ಲಿ ಕುಳಿತುಕೊಳ್ಳುವಷ್ಟು ಸಮರ್ಥರು” ಎಂದು ತೋರಿಸಿಕೊಟ್ಟಿದ್ದಾರೆ ಎನ್ನುತ್ತಾರೆ.   

ಕಡೆಯದಾಗಿ ಶ್ರೀ ಹೆಚ್‌.ಜೆ.ಖಾಂಡೇಕರ್ ಎಂಬುವವರ ಹೇಳಿಕೆಯನ್ನು ದಾಖಲಿಸುವುದಾದರೆ “ಮಾನ್ಯರೆ, ನಾವು ಅಂಬೇಡ್ಕರರಂತಹ ಪ್ರತಿಭಾಶಾಲಿಯಿಂದ ರೂಪಿತಗೊಂಡ ಕಾನೂನನ್ನು ಸ್ವತಂತ್ರ ಭಾರತದಲ್ಲಿ ಇಂದು ಕಾರ್ಯಾಚರಣೆಗಿಳಿಸುತ್ತಿದ್ದೇವೆ. ಹಾಗೆ ಈ ಕಾನೂನನ್ನು ನಾನು ಮಹಾರ್ ಕಾನೂನು ಎನ್ನಲಿಚ್ಚಿಸುತ್ತೇನೆ ಯಾಕೆಂದರೆ ಡಾ.ಅಂಬೇಡ್ಕರರು ಮಹಾರ್ ಸಮುದಾಯದವರು ಮತ್ತು ಮುಂದೆ 1950 ಜನವರಿ 26ರಂದು ಈ ಕಾನೂನು ಉದ್ಘಾಟನೆಗೊಂಡಾಗ ನಾವು ಮನುವಿನ ಕಾನೂನಿನ ಬದಲು ಮಹಾರರ ಕಾನೂನನ್ನು ಹೊಂದುತ್ತೇವೆ. ಎಂಬ ಆಶಾವಾದ ಒಕ್ಕೋರಲ ಅಭಿಪ್ರಾಯವನ್ನು ಹೊರಹಾಕಿದರು. ಈ ಆಶಾವಾದವು ಭಾರತದ ಭವಿಷ್ಯವನ್ನು ಉಜ್ವಲಗೊಳಿಸಬಲ್ಲದು ಎಂದು ನಂಬಿದರು. ಸಮಸಮಾಜದ ಉದ್ದಾರಕ್ಕೆ ನಮ್ಮ ಈ ಸಂವಿಧಾನ ಆಶಾಕಿರಣವಾಗಬಹುದು ಎಂದು ಮನಗಂಡರು. ಅಂದು ಅವರು ಕಂಡ ಕನಸಿನ ಸಂವಿಧಾನ ನೂರಕ್ಕೆ ನೂರರಷ್ಟು ಸಮಸ್ತರ ಹಿತ ಕಾದಿದೆ ಎಂಬುದಂತೂ ಸತ್ಯ. ಆದರೆ ಸಂವಿಧಾನದ ಈ ಆಶಯಗಳಿಂದ ಅಂಬೇಡ್ಕರರ ಸರ್ವೇಜನ ಸುಖಿನೋಭವಂತು ಎಂಬ ಆಶಯದಿಂದ ಬಹುತೇಕರು ಸುಖದ ಬದುಕನ್ನು ಕಟ್ಟಿಕೊಂಡಿರುವುದು ಕಣ್ಣೆದುರಿಗಿದೆ. 


ಸುದ್ದಿ ಓದಿ