ಕಾರವಾರ

ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಕಾರವಾರ 21: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಿಲ್ಲಾ ರಂಗಮಂದಿರದಲ್ಲಿ ಮಹಾನ್ ದಾರ್ಶನಿಕ ಅಂಬಿಗರ ಚೌಡಯ್ಯ ಜಯಂತಿ ನಿಮಿತ್ತ ಭಾವಚಿತ್ರಕ್ಕೆ ದೀಪ ಬೆಳಗುವ ಮೂಲಕ ಅತ್ಯಂತ ಸರಳವಾಗಿ ಆಚರಿಸಲಾಯಿತು.

ಸಾಮಾಜಿಕ ಕಾರ್ಯಕರ್ತರಾದ ಬಾಬು ಅಂಬಿಗ, ಶ್ರೀಕಾಂತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಎನ್.ಜಿ. ನಾಯಕ ಅವರು ಸಂಯುಕ್ತವಾಗಿ ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಡಿಡಿಪಿಐ ಕಚೇರಿಯ ನೌಕರ ಪ್ರವೀಣ್ ತಳೇಕರ ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು. ಹತ್ತು ನಿಮಿಷಯದಲ್ಲಿ ಕಾರ್ಯಕ್ರಮ ಮುಕ್ತಾಯವಾಯಿತು.  ಅಂಬಿಗರ ಸಮಾಜದ ಪ್ರಮುಖ ಮುಖಂಡರು ಸಮಾರಂಭಕ್ಕೆ ಆಹ್ವಾನ ಇರದ ಕಾರಣ ಬಂದಿರಲಿಲ್ಲ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುತ್ತಿದ್ದ ಜಯಂತಿ ರಂಗಮಂದಿರದಲ್ಲಿ ಜರುಗಿತು.

ಸುದ್ದಿ ಓದಿ