ಮಳೆ ಕೊರತೆ ಹಿನ್ನೆಲೆ: ನೀರು ಬಿಡುಗಡೆಗೆ ಆಗ್ರಹಿಸಿ ಜುಲೈ 16ರಂದು ರೈತರ ಸಭೆ
Amidst rainfall deficit: Farmers' meeting on July 16 to demand water release
ಕೊಲಾರ 15: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಸಮರ್ಕ ಮಳೆಯಾಗದ ಹಿನ್ನೆಲೆಯಲ್ಲಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿತ್ತನೆ ಕಾರ್ಯಗಳು ಸ್ಥಗಿತಗೊಂಡಿದ್ದು, ಎತ್ತಿನೀರಾವರಿ ಯೋಜನೆಗಳಿಗೆ ತಕ್ಷಣ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿ ಜುಲೈ 16ರಂದು ಬೆಳಿಗ್ಗೆ 10.30ಕ್ಕೆ ತಾಲೂಕಿನ ಮಟ್ಟಿಹಾಳ ಕ್ರಾಸ್ನಲ್ಲಿ ರೈತರ ಸಭೆ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ತಿಳಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಳಿ ಜಿಲ್ಲೆಗಳ ಎತ್ತಿನೀರಾವರಿ ಯೋಜನೆಗಳನ್ನು ತಕ್ಷಣ ಆರಂಭಿಸಿ,
ಅವುಗಳನ್ನು ಶಾಶ್ವತವಾಗಿ ನೀರು ನಿರ್ವಹಣಾ ಸಲಹಾ ಸಮಿತಿಯ ವ್ಯಾಪ್ತಿಯಿಂದ ಹೊರಗಿಡುವಂತೆ ಸರ್ಕಾರವನ್ನು ಒತ್ತಾಯಿಸಿದರು. ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಹಾಗೂ ಕೃಷ್ಣಾ ನದಿಗೆ ನೀರಿನ ಹರಿವು ವಿಳಂಬವಾಗಿರುವ ಕಾರಣ ಬೆಳೆಗಳು ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರಿನ ಸಮಸ್ಯೆಯೂ ತೀವ್ರವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಈ ಕುರಿತು ಈಗಾಗಲೇ ನೀರಾವರಿ ಸಚಿವರು ಹಾಗೂ ಕೆಬಿಜೆಎನ್ಎಲ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಆರೋಪಿಸಿದರು.
ರೈತರ ಪ್ರಮುಖ ಬೇಡಿಕೆಗಳು:
ಸಿಮುಳವಾಡ, ಚಿಮ್ಮಲಗಿ ಹಾಗೂ ಗುತ್ತಿ ಬಸವಣ್ಣ ಎತ್ತಿನೀರಾವರಿ ಯೋಜನೆಗಳಿಗೆ ತಕ್ಷಣ ನೀರು ಬಿಡುಗಡೆ ಮಾಡಬೇಕು.
ಸಿಆಲಮಟ್ಟಿ ಜಲಾಶಯದ ಎಡ ಹಾಗೂ ಬಲದ ಮುಖ್ಯ ಕಾಲುವೆಗಳ ಮೂಲಕ ನೀರು ಹರಿಸಬೇಕು.
ಸಿಎತ್ತಿನೀರಾವರಿ ಯೋಜನೆಗಳನ್ನು ನೀರು ನಿರ್ವಹಣಾ ಸಲಹಾ ಸಮಿತಿಯ ವ್ಯಾಪ್ತಿಯಿಂದ ಹೊರಗಿಡಬೇಕು.
ಸಿಭೂಮಿ ಕಳೆದುಕೊಂಡ ರೈತರಿಗೆ ನ್ಯಾಯಯುತ ಹಾಗೂ ಶಾಶ್ವತ ಪರಿಹಾರ ನೀಡಬೇಕು.
ಜುಲೈ 14ರೊಳಗೆ ನೀರು ಬಿಡುಗಡೆ ಮಾಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಈಗಾಗಲೇ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿತ್ತು. ಆದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ರೂಪುರೇಷೆ ಕುರಿತು ಚರ್ಚಿಸಲು ಈ ಸಭೆ ಕರೆಯಲಾಗಿದೆ. ಜಿಲ್ಲೆಯ ಎಲ್ಲಾ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಎಸ್.ಕೆ. ಬೆಳ್ಳುಬ್ಬಿ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಬಸಪ್ಪಗೌಡ ಮನಗೂಳಿ, ಚಂದ್ರು ನಟ್ಟೇಕಟ್ಟಿ, ಪರಮಾನಂದ ಬರಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ 