ದೆಹಲಿ-ಕತ್ರಾ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಅಮಿತ್ ಶಾ ಚಾಲನೆ
ನವದೆಹಲಿ, ಅ 3: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಲ್ಲಿ ನಡೆದ ಸಮಾರಂಭದಲ್ಲಿ ದೆಹಲಿ-ಕತ್ರಾ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು. ಈ ರೈಲು ದೆಹಲಿ ಮತ್ತು ಕತ್ರಾ ನಡುವಿನ ಪ್ರಯಾಣದ ಸಮಯವನ್ನು ಪ್ರಸ್ತುತ 12 ಗಂಟೆಗಳಿಂದ ಎಂಟು ಗಂಟೆಗೆ ತಗ್ಗಿಸುತ್ತದೆ. ಮಂಗಳವಾರ ಹೊರತುಪಡಿಸಿ ವಾರದ ಎಲ್ಲಾ ದಿನಗಳಲ್ಲಿ ಹೈಸ್ಪೀಡ್ ರೈಲು ಚಲಿಸಲಿದ್ದು, ಅದರ ಮೊದಲ ವಾಣಿಜ್ಯ ಓಡಾಟ ಅಕ್ಟೋಬರ್ 5 ರಿಂದ ಪ್ರಾರಂಭವಾಗಲಿದೆ. ರೈಲು ಸಂಖ್ಯೆ 22439 ನವದೆಹಲಿ-ಕತ್ರಾ ವಂದೇ ಭಾರತ್ ಎಕ್ಸ್ಪ್ರೆಸ್ ನವದೆಹಲಿ ರೈಲ್ವೆ ನಿಲ್ದಾಣದಿಂದ 0600 ಗಂಟೆಗೆ ಹೊರಟು 1400 ಗಂಟೆಗೆ ಕತ್ರಾ ತಲುಪಲಿದೆ. ಇದು ಅದೇ ದಿನ ಕತ್ರಾವನ್ನು 1500 ಗಂಟೆಗೆ ಬಿಟ್ಟು 2300 ಗಂಟೆಗೆ ನವದೆಹಲಿ ರೈಲ್ವೆ ನಿಲ್ದಾಣವನ್ನು ತಲುಪಲಿದೆ. ಈ ರೈಲು ಸಂಪೂರ್ಣ ಹವಾನಿಯಂತ್ರಿತವಾಗಿದ್ದು, ಎಂಟು ಗಂಟೆಗಳಲ್ಲಿ ಕತ್ರವನ್ನು ತಲುಪುವ ಮೊದಲು ಅಂಬಾಲಾ ಕ್ಯಾಂಟ್, ಲುಧಿಯಾನ ಮತ್ತು ಜಮ್ಮು ತಾವಿಯಲ್ಲಿ ನಿಲ್ಲುತ್ತದೆ. ಈ ಸಮಾರಂಭದಲ್ಲಿ ರೈಲ್ವೆ ಸಚಿವ ಪಿಯೂಷ್ ಗೋಯಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹರ್ಷ ವರ್ಧನ್ ಮತ್ತು ಕೇಂದ್ರ ಸಚಿವ ಜಿತೇಂದರ್ ಸಿಂಗ್ ಭಾಗವಹಿಸಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 