ಅಮೃತ ಮಹೋತ್ಸವ: ಧ್ವಜಾರೋಹಣ
ಶಿಗ್ಗಾವಿ16 : ತಾಲೂಕಿನ ಹೊಸೂರು ಗ್ರಾಮ ಪಂಚಾಯತಿಯ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ಗ್ರಾಮ ಪಂಚಾಯತಿ ಅಧ್ಯಕ್ಷ ಅಣ್ಣಪ್ಪ ಲಮಾಣಿ ನೇರವೇರಿಸಿದರು.
ನಂತರ ಮಾತನಾಡಿ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ನೀಡಿದ ಹಾಗೂ ಸ್ವಾತಂತ್ರ್ಯ ಸಿಗಲು ಕಾರಣಿಕರ್ತರಾದ ಎಲ್ಲ ಮಹನೀಯರನ್ನು ಸ್ಮರಿಸುವ ಸುದಿನ ಎಂದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಗ್ರಾಮದ ಹಿರಿಯರು ಹಾಗೂ ಇನ್ನೂ ಅನೇಕರು ಉಪಸ್ಥಿತರಿದ್ದರು