ಅಂಫಾನ್ ಹಾವಳಿ : ಪ್ರಧಾನಿ ಮೋದಿ, ಮುಖ್ಯಮಂತ್ರಿ ಮಮತಾರಿಂದ ವೈಮಾನಿಕ ಸಮೀಕ್ಷೆ
ಕೋಲ್ಕತಾ, ಮೇ 22, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಂಫಾನ್ ಚಂಡಮಾರುತದಿಂದ ಹಾನಿಗೊಳಗಾದ ಜಿಲ್ಲೆಗಳಲ್ಲಿಂದು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಭೀಕರ ಚಂಡಮಾರುತಕ್ಕೆ ಇಲ್ಲಿಯವರೆಗೆ 72 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕ ಪ್ರದೇಶಗಳಿಗೆ ತೆರಳು ಸಾಧ್ಯವಾಗುತ್ತಿಲ್ಲವಾದ್ದರಿಂದ ಅಲ್ಲಿನ ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. "ಅಂಫಾನ್ ಚಂಡಮಾರುತದ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳ ಮತ್ತು ಒಡಿಶಾಗೆ ಪ್ರಯಾಣಿಸಲಿದ್ದಾರೆ" ಎಂದು ಪ್ರಧಾನಿ ಕಚೇರಿ ಟ್ವೀಟರ್ ತಿಳಿಸಿದೆ. "ಪ್ರಧಾನಿಯವರು ವೈಮಾನಿಕ ಸಮೀಕ್ಷೆಗಳನ್ನು ನಡೆಸಿ, ಪರಿಶೀಲನಾ ಸಭೆಗಳಲ್ಲಿ ಪಾಲ್ಗೊಳ್ಳುತ್ತಾರೆ, ಅಲ್ಲಿ ಪರಿಹಾರ ಮತ್ತು ಪುನರ್ವಸತಿ ಅಂಶಗಳನ್ನು ಚರ್ಚಿಸಲಾಗುವುದು" ಎಂದು ಅದು ಹೇಳಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಡನೆ ರಕ್ಷಣಾ ಹೆಲಿಕಾಪ್ಟರ್ ಮೂಲಕ ದಕ್ಷಿಣ 24 ಪರಗಣಗಳು ಮತ್ತು ಉತ್ತರ 24 ಪರಗಣಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಲಿದ್ದಾರೆ. ಇವು ಚಂಡಮಾರುತದಿಂದ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಾಗಿವೆ. ಉತ್ತರ 24 ಪರಗಣ ಜಿಲ್ಲೆಯ ಬಸಿರ್ಹತ್‌ನಲ್ಲಿ ವಿಶೇಷ ಆಡಳಿತ ಸಭೆ ನಡೆಯಲಿದ್ದು, ಪ್ರಧಾನಿ ಮತ್ತು ಸಿಎಂ ಇಬ್ಬರೂ ಸಂಬಂಧಪಟ್ಟ ಆಡಳಿತಾಧಿಕಾರಿಗಳೊಂದಿಗ ಚರ್ಚಿಸಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 