ಕೊರೋನ ಲಸಿಕೆ ವಿತರಣೆ : ಇಂದು ಸರ್ವಪಕ್ಷಗಳ ಸಭೆ
ನವದೆಹಲಿ,
ಡಿಸೆಂಬರ್, 4 : ಕೊರೊನಾ ಸೋಂಕು ನಿವಾರಣಾ ಲಸಿಕೆ ವಿತರಣೆ ಕುರಿತು ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು
ಇಂದು ಸರ್ವಪಕ್ಷ ನಾಯಕರ ಸಭೆ ಕರೆದಿದ್ದಾರೆ.
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಇಂದು ವರ್ಚುವಲ್ ಸಭೆ ನಡೆಯಲಿದ್ದು, ಎಲ್ಲಾ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.
ವಿವಿಧ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಈಗಾಗಲೇ ಸಭೆ ಮಾಡಿದ್ದು ತದನಂತರ ಈಗ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗುತ್ತಿದ್ದಾರೆ.
ಇಂದಿನ ಸಭೆಯಲ್ಲಿ ಕೊರೊನಾ ವೈರಸ್ ಲಸಿಕೆ ಹಾಗೂ ರೈತರ ಪ್ರತಿಭಟನೆ ಕುರಿತಂತೆ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.