ಚುನಾವಣಾ ಪ್ರಕ್ರಿಯೆ ಪಾರದರ್ಶಕತೆಗೆ ದೋಷಮುಕ್ತ ಮತದಾರರ ಪಟ್ಟಿ ಅಗತ್ಯ
An error-free electoral roll is essential for the transparency of the election process
ಲೋಕದರ್ಶನ ವರದಿ
ಬಳ್ಳಾರಿ 09: ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷಗಳಿಲ್ಲದ, ದೋಷಮುಕ್ತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ನಂದಿ ಪಿಯು ಕಾಲೇಜು ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ಎಸ್ಐಆರ್’ ವಿಶೇಷ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಮುಂಬರುವ ಚುನಾವಣೆಗಳಲ್ಲಿ ಯುವಕರ ಪಾತ್ರವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಕಾಲೇಜು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ‘ವಿಶೇಷ ಸಮಗ್ರ ಪರಿಷ್ಕರಣೆ' ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಎಸ್ಐಆರ್ ಪ್ರಕ್ರಿಯೆಯಲ್ಲಿ ಅರ್ಹತೆ ಪಡೆಯಲಿರುವ ಹೊಸ ಯುವ ಮತದಾರರನ್ನು ಗುರುತಿಸಿ ಪಟ್ಟಿಗೆ ಸೇರಿಸುವುದು. ಹಿಂದೆ ನಡೆದಿರುವಂತೆ ಒಬ್ಬರೇ ವ್ಯಕ್ತಿ ಹಲವು ಬಾರಿ ಮತದಾನ ಮಾಡುವುದು ಅಥವಾ ಮೃತಪಟ್ಟವರ ಹೆಸರಿನಲ್ಲಿ ಮತದಾನವಾಗುವುದನ್ನು ತಡೆಯಲು ಹಳೆಯ ಮತದಾರರ ವಿವರಗಳನ್ನು ಕಟ್ಟುನಿಟ್ಟಾಗಿ ಮರುಪರೀಶೀಲಿಸಲಾಗುತ್ತದೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 