ಅವರೊಳ್ಳಿ ಗ್ರಾಮದ ಅಭಿವೃದ್ಧಿಗೆ ಮಹತ್ವದ ಹೆಜ್ಜೆ

ಅವರೊಳ್ಳಿ ಗ್ರಾಮದ ಅಭಿವೃದ್ಧಿಗೆ ಮಹತ್ವದ ಹೆಜ್ಜೆ  An important step for the development of Avarrolli village

ಲೋಕದರ್ಶನ ವರದಿ 

ಖಾನಾಪುರ 29: ಅವರೊಳ್ಳಿ ಗ್ರಾಮದ ಗ್ರಾಮದೇವತೆ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.   ಶಾಸಕ ವಿಠ್ಠಲ ಹಲಗೇಕರ ಅವರ ಅನುದಾನದಲ್ಲಿ 10 ಲಕ್ಷ ರೂಪಾಯಿ ಮಂಜೂರಾಗಿದ್ದು, ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.  ಪ್ರಮುಖರಾದ ಪ್ರಮೋದ ಕೋಚೇರಿ, ಬಸವರಾಜ ಸಾಣಿಕೊಪ್ಪ, ಯಶವಂತ ಕೊಡೊಳ್ಳಿ, ಸಹದೇವ ಬಡಗೇರ ಗ್ರಾಮದ ಹಿರಿಯರು, ಯುವಕರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.