ಚಿತ್ರಕಲಾ ಸ್ಪರ್ಧೆಯಲ್ಲಿ ಅನನ್ಯಾ ಪ್ರಥಮ
Ananya wins first place in the drawing competition
ಲೋಕದರ್ಶನ ವರದಿ
ಗದಗ, ಆ. 9: “ನಮ್ಮ ಶಕ್ತಿ” (ಅಂತರ್ಜಲ ಸಂರಕ್ಷಣೆ) ವಿಷಯದಡಿ ನಡೆದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಗದಗದ ಸಿಡಿಒ ಜೈನ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಅನನ್ಯಾ ರಾಘವೇಂದ್ರ ಪಾಲನಕರ್ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆ, ಅಂತರ್ಜಲ ನಿರ್ದೇಶನಾಲಯ, ಬೆಂಗಳೂರು, ಜಿಲ್ಲಾ ಅಂತರ್ಜಲ ಕಚೇರಿ, ಗದಗ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ರಿನ್ಯೂ (ಅಕಿಲಾಗ್ಯ) ಸೋಲಾರ್ ಪ್ರೈವೇಟ್ ಲಿಮಿಟೆಡ್, ಲಕ್ಕುಂಡಿ ಇವರ ಸಂಯುಕ್ತಾಶ್ರಯದಲ್ಲಿ “ನೀರಿದ್ದರೆ ನಾಳೆ” ಕಾರ್ಯಕ್ರಮದಡಿ “ಜಲ ಸಂರಕ್ಷಣೆ ಮತ್ತು ಸದ್ಬಳಕೆ” ಕುರಿತು ಸ್ಪರ್ಧೆ ಆಯೋಜಿಸಲಾಗಿತ್ತು.
ಆ. 1ರಂದು ಗದಗ ನಗರದ ಯುಆರಿ್ಸ ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಅನನ್ಯಾ ಪ್ರಥಮ ಸ್ಥಾನ ಗಳಿಸಿದರು. ಆ. 10ರಂದು ನಡೆಯಲಿರುವ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಗೆ ಅವರು ಆಯ್ಕೆಯಾಗಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 