ಅನಸೂಯಾ ಚಲ್ಲಾಳ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ರಾಣೇಬೆನ್ನೂರು 16: ನಗರದ ಬಿ.ಎ.ಜೆ.ಎಸ್.ಎಸ್. ಮಹಿಳಾ ಮಹಾವಿದ್ಯಾಲಯದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಅನಸೂಯಾ ಚಲ್ಲಾಳ್ ಇತ್ತೀಚೆಗೆ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಯೋಗ ಪೌಂಡೆಷನ್ ಹಾಗೂ ನೆಹರು ಯುವಕೇಂದ್ರದ ಅಡಿಯಲ್ಲಿ ನಡೆದ ಅಂತರಾಜ್ಯ ಯೋಗಾಸನ ಸ್ಪರ್ಧೆಯಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರತಿಭಾನ್ವಿತ ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಚೇರಮನ್ನರು ಹಾಗೂ ಕರ್ನಾಟಕ ವಿಧಾನಸಭೆಯ ಉಪಸಭಾಧ್ಯಕ್ಷ ರುದ್ರ್ಪ ಎಂ.ಲಮಾಣಿ ಕಾರ್ಯದರ್ಶಿಗಳು, ಆಡಳಿತಾಧಿಕಾರಿ ಡಾ. ಆರ್.ಎಮ್.ಕುಬೇರ್ಪ ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗ ಹಾಗೂ ಎಲ್ಲಾ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.