ವಿಜಯಪುರ

ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಅಣ್ಣಪ್ಪ ಖೈನೂರ ನೇಮಕ

ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಅಣ್ಣಪ್ಪ ಖೈನೂರ ನೇಮಕ


ವಿಜಯಪುರ ಸೆ.21: ಜಿಲ್ಲೆಯ ಹಿರಿಯ ರೈತ ನಾಯಕ ಅಣ್ಣಪ್ಪ ಖೈನೂರ ಅವರನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ರೈತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ನೇಮಕ ಮಾಡಲಾಗಿದೆ.  

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಆದೇಶದ ಮೇರೆಗೆ ನೇಮಕಾತಿ ಆದೇಶ ಹೊರಡಿಸಲಾಗಿದ್ದು, ಆದೇಶ ಪತ್ರವನ್ನು ಅಣ್ಣಪ್ಪ ಖೈನೂರ ಅವರಿಗೆ ನೀಡಿ ಜವಾಬ್ದಾರಿ ವಹಿಸಲಾಯಿತು.  

ಈ ಸಂದರ್ಭದಲ್ಲಿ ಮಾಜಿ ಶಾಸಕ ಎ.ಎಸ್‌. ಪಾಟೀಲ, ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ಸಾವಯವ ಬೀಜ ಪ್ರಮಾಣೀಕರಣ ಸಂಸ್ಥೆಯ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ,

ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಬಾಲರಾಜ ರೆಡ್ಡಿ, ಮುಖಂಡರಾದ ಉಮೇಶ ಕಾರಜೋಳ, ಕಾಸುಗೌಡ ಬಿರಾದಾರ, ಶಿಲ್ಪಾ ಕುದರಗೊಂಡ ಹಾಗೂ ವಿಜಯ ಜೋಶಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. 


ಸುದ್ದಿ ಓದಿ