ರೈತರ ಸಂಕಷ್ಟಕ್ಕೆ ತಕ್ಷಣ ಪರಿಹಾರ ಘೋಷಿಸಿ: ಕೋಡಿಹಳ್ಳಿ ಚಂದ್ರಶೇಖರ್
Announce immediate relief for farmers' distress: Kodihalli Chandrashekhar
ರೈತರ ಸಂಕಷ್ಟಕ್ಕೆ ತಕ್ಷಣ ಪರಿಹಾರ ಘೋಷಿಸಿ: ಕೋಡಿಹಳ್ಳಿ ಚಂದ್ರಶೇಖರ್
ರಾಣೆಬೆನ್ನೂರು ಸೆ.13: ರಾಜ್ಯದಲ್ಲಿ ರೈತರ ಪರವಾಗಿ ಧ್ವನಿ ಎತ್ತುವ ವಿರೋಧ ಪಕ್ಷಗಳು ಇಲ್ಲದಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘವು ರೈತರ ಪರವಾಗಿ ತನ್ನ ಬಲವಾದ ಧ್ವನಿಯ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡುವುದು ಅನಿವಾರ್ಯವಾಗಿದೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಹಿತಕ್ಕಾಗಿ ಹೋರಾಟ ನಡೆಸುವ ಮೂಲಕ ಕೆರೆ ತುಂಬಿಸುವ ಯೋಜನೆ ಜಾರಿಗೆ ತರಲಾಗಿದೆ. ಯಾವುದೇ ರೈತನಿಗೆ ಅನ್ಯಾಯವಾಗಬಾರದು ಎಂಬ ದೂರದೃಷ್ಟಿಯಿಂದ ರೈತ ಸಂಘ ಕಾರ್ಯನಿರ್ವಹಿಸುತ್ತಿದೆ ಎಂದರು. ರಾಜ್ಯದಲ್ಲಿ ಮುಂಗಾರು ವಿಫಲವಾಗಿದ್ದು, ಬರ ಪರಿಸ್ಥಿತಿ ಮುಂದುವರಿದಿದೆ. ಸರ್ಕಾರ 101 ಹಳ್ಳಿಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಇನ್ನೂ 25 ಹಳ್ಳಿಗಳನ್ನು ಪರಿಗಣಿಸುವುದಾಗಿ ತಿಳಿಸಿದೆ. ತಾವು ಭೇಟಿ ನೀಡಿ ಪರೀಶೀಲಿಸಿದ ಪ್ರಕಾರ ಇನ್ನೂ 75 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಬೇಕು. ವೈಜ್ಞಾನಿಕ ವರದಿ ಆಧರಿಸಿ ರೈತರಿಗೆ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು. ಉತ್ತರ ಕರ್ನಾಟಕದಲ್ಲಿ ರೈತರು ಹೆಚ್ಚಿನ ಪ್ರಮಾಣದಲ್ಲಿ ಬೆಳೆ ನಷ್ಟ ಅನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ತಕ್ಷಣ ವೈಜ್ಞಾನಿಕವಾಗಿ ಪರೀಶೀಲಿಸಿ ಬೆಳೆ ನಷ್ಟಕ್ಕೆ ಪರಿಹಾರ ನೀಡಬೇಕು. ಕಳೆದ 25 ವರ್ಷಗಳ ಹಿಂದೆ ಇದ್ದ ವಿದ್ಯುತ್ ಕ್ಷಾಮದ ಪರಿಸ್ಥಿತಿ ಈಗ ಇಲ್ಲ. ಹಲವು ಹೊಸ ಯೋಜನೆಗಳು ಜಾರಿಯಲ್ಲಿರುವಾಗ ವಿದ್ಯುತ್ ಕಡಿತ ಮಾಡುವುದು ಸರಿಯಲ್ಲ. ಈ ಕುರಿತು ಸೆ.29ರಂದು ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಹಲವು ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದರು. ಸಾಲ ಪಡೆದ ರೈತರಿಗೆ ಪದೇಪದೆ ನೋಟಿಸ್ ನೀಡುವುದು ಹಾಗೂ ಮನೆ ಬಾಗಿಲಿಗೆ ತೆರಳಿ ಒತ್ತಡ ಹೇರುವುದು ಸರಿಯಲ್ಲ. ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ರೈತರ ಸಂಕಷ್ಟದ ಸಂದರ್ಭದಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರು ದೆಹಲಿಗೆ ತೆರಳಿ ಕೇಂದ್ರದ ಮೊರೆ ಹೋಗುವುದಕ್ಕಿಂತ ರಾಜ್ಯದಲ್ಲೇ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬೃಹತ್ ರೈತ ಚಳವಳಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರಾದ ರವೀಂದ್ರಗೌಡ ಪಾಟೀಲ, ಜಿಲ್ಲಾ ಅಧ್ಯಕ್ಷ ಛತ್ರಸಪ್ಪ ಪಾಟೀಲ, ಚಂದ್ರಣ್ಣ ಬೇಡರ, ಬಸವಂತಪ್ಪ ಹರಳಳ್ಳಿ, ಸುರೇಶಪ್ಪ ಗರಡಿಮನಿ, ಹನುಮಂತಪ್ಪ ಲಮಾಣಿ, ದಿಳ್ಳಪ್ಪ ಸತ್ಯಪ್ಪನವರ, ಹರಿಹರಗೌಡ ಪಾಟೀಲ, ಶಂಕರಗೌಡ ಸೇರಿದಂತೆ ವಿವಿಧ ತಾಲೂಕುಗಳ ಪದಾಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 