ನ. 12 ರಿಂದ 14ರವರೆಗೆ ಪೊಲೀಸ್ ವಾರ್ಷಿಕ ಕ್ರೀಡಾಕೂಟ
ಲೋಕದರ್ಶನ ವರದಿ
ಹುಬ್ಬಳ್ಳಿ 11: ಪೋಲಿಸ್ ಆಯುಕ್ತಾಲಯ ಹುಬ್ಬಳ್ಳಿ ಧಾರವಾಡ ನಗರ ವತಿಯಿಂದ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ನವೆಂಬರ್ 12 ರಿಂದ ನವೆಂಬರ್ 14ರವರೆಗೆ ಗೋಕುಲ ರಸ್ತೆಯ ನಗರ ಸಶಸ್ತ್ರ ಮೀಸಲು ಪಡೆಯ ಕವಾಯತ ಮೈದಾನದಲ್ಲಿ ಆಯೋಜಿಸಲಾಗಿದೆ.
ನವೆಂಬರ್ 12ರಂದು ಬೆಳಿಗ್ಗೆ 8.30 ಕ್ಕೆ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ನಡೆಯಲಿದೆ. ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಟೀಲ ಭುವನೇಶ ದೇವಿದಾಸ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ನವೆಂಬರ್ 14ರಂದು ಸಂಜೆ 4 ಗಂಟೆಗೆ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭ ಜರುಗಲಿದೆ. ಜಿಲ್ಲಾಧಿಕಾರಿಗಳಾದ ಸ್ನೇಹಲ್ ಆರ್. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಬಹುಮಾನ ವಿತರಣೆ ಮಾಡುವರು ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಬೊರಸೆ ಭೂಷಣ ಗುಲಾಬರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.