ಜೆಎಸ್ಎಸ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಸಂಭ್ರಮ
ಲೋಕದರ್ಶನ ವರದಿ
ಧಾರವಾಡ 06 : ನಗರದ ಮೃತ್ಯುಂಜಯ ನಗರದ ಜೆಎಸ್ಎಸ್ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ಸಂಭ್ರಮದಿಂದ ಆಯೋಜಿಸಲಾಯಿತು. ಕ್ರೀಡಾಕೂಟಕ್ಕೆ ಜೆಎಸ್ಎಸ್ ಐಟಿಐ ಕಾಲೇಜಿನ ಪ್ರಾಂಶುಪಾಲರಾದ ರಾಹುಲ್ ಉಪಾಧ್ಯೆ, ಜೆಎಸ್ಎಸ್ ಎಸ್ಎಂ.ಪಿ.ಯು. ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ. ಎನ್. ಭಾವಿ ಹಾಗೂ ಶಾಲೆಯ ಪ್ರಾಂಶುಪಾಲರಾದ ತ್ರಿವೇಣಿ ಆರ್. ಉಪಸ್ಥಿತರಿದ್ದರು. ಕ್ರೀಡಾಕೂಟದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.
ಕ್ರೀಡಾ ಜ್ಯೋತಿ ಬೆಳಗಿಸುವುದು, ಕ್ರೀಡಾಪಟುಗಳ ಪ್ರತಿಜ್ಞಾವಿಧಿ ಹಾಗೂ ಪಥಸಂಚಲನದ ಮೂಲಕ ಕ್ರೀಡಾಕೂಟಕ್ಕೆ ಮೆರುಗು ನೀಡಲಾಯಿತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ತಂಡದ ಮನೋಭಾವ ಹಾಗೂ ಕ್ರೀಡಾಸ್ಫೂರ್ತಿಯನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಕ್ರೀಡಾಕೂಟವು ಯಶಸ್ವಿಯಾಗಿ ನೆರವೇರಿತು. ಪ್ರಾಂಶುಪಾಲರಾದ ತ್ರಿವೇಣಿ ಆರ್. ಅವರ ಮಾರ್ಗದರ್ಶನದಲ್ಲಿ ಶಿಕ್ಷಕ ವೃಂದ ಹಾಗೂ ದೈಹಿಕ ಶಿಕ್ಷಣ ವಿಭಾಗದ ಸಹಕಾರದೊಂದಿಗೆ ಕಾರ್ಯಕ್ರಮ ಸಂಘಟಿಸಲಾಯಿತು.