ವೀರಶೈವ ಮಹಾವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ
Annual sports meet inaugurated at Veerashaiva College
ಬಳ್ಳಾರಿ 20: ನಗರದಲ್ಲಿ ವೀ.ವಿ. ಸಂಘದ ಪ್ರತಿಷ್ಠಿತ ವೀರಶೈವ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ವತಿಯಿಂದ ವಾರ್ಷಿಕ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮ ನಿನ್ನೆ ಬೆಳಗ್ಗೆ 9 ಗಂಟೆಗೆ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರಶೈವ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಸಾಹುಕಾರ್ ಸತೀಶ್ ಬಾಬು ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಸದೃಢ ದೇಹದಲ್ಲಿ ಸದೃಢ ಮನಸ್ಸು” ಎಂಬ ಸಂದೇಶವನ್ನು ವಿದ್ಯಾರ್ಥಿಗಳಿಗೆ ನೀಡಿ, ಕ್ರೀಡೆಗಳು ವ್ಯಕ್ತಿತ್ವ ವಿಕಸನಕ್ಕೆ ಅತ್ಯಂತ ಅಗತ್ಯವೆಂದು ತಿಳಿಸಿದರು.ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ಪ್ರೋ. ಎನ್.ಎಂ. ಸಾಲಿ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಬೇಕೆಂದು ಕರೆ ನೀಡಿದರು.
ಮಹಾವಿದ್ಯಾಲಯದ ಪ್ರಾಚಾರ್ಯ ಶ್ರೀ ಜಿ. ಮಲ್ಲನಗೌಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಹೆಚ್.ಪಿ. ಜಯಪ್ರಕಾಶ್ ಗೌಡ, ಹೆಚ್. ಚಂದ್ರಶೇಖರ್ ಗೌಡ ಹಾಗೂ ಡಾ. ಶಶಿದರ್ ಎ. ಕೆಲ್ಲೂರು ಉಪಸ್ಥಿತರಿದ್ದರು.ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಎಸ್. ವೆಂಕಟೇಶ್ ಗೌಡ, ಕಾರದಪುಡಿ ಮುದ್ದನಗೌಡ, ಅಕ್ಕಿ ಶಿವರಾಜ್, ಡಿ. ನಂಜುಂಡಪ್ಪ ಹಾಗೂ ವೀರಶೈವ ಪದವಿ ಪೂರ್ವ ಕಾಲೇಜಿನ ಸದಸ್ಯ ಮಹೇಶ್ವರ ಸ್ವಾಮಿ ಭಾಗವಹಿಸಿದ್ದರು.ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸೇರಿದಂತೆ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಕವಿತಾ ಸಂಗನಗೌಡ ಎಂ. ಕಾರ್ಯಕ್ರಮ ನಿರ್ವಹಿಸಿದರು. ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಶರಣಬಸವ ಸ್ವಾಗತಿಸಿದರು. ಐಕ್ಯೂಎಸಿ ಸಂಯೋಜಕರಾದ ಡಾ. ವಿನೋದಕುಮಾರ ಪ್ರತಿಜ್ಞಾವಿಧಿ ಬೋಧಿಸಿದರು. ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಕುಮಾರಿ ರೇಖಾಶ್ರಿ ಎಸ್. ವಂದಿಸಿದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 