ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ
ಚಾಮರಾಜನಗರ, ಅ 9: ಮೂರ್ಕಾಲು ಗುಡ್ಡದಲ್ಲಿ ಹುಲಿ ದಾಳಿಗೆ ಮತ್ತೋರ್ವ ರೈತ ಮೃತಪಟ್ಟಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿಯಲ್ಲಿ ಮಂಗಳವಾರ ನಡೆದಿದೆ. ಶಿವಲಿಂಗಪ್ಪ ಎಂಬುವವರು ನಿನ್ನೆ ತಮ್ಮ ಜಮೀನಿನಲ್ಲಿ ದನ ಮೇಯಿಸುತ್ತಿದ್ದಾಗ ಏಕಾಏಕಿ ಹುಲಿ ದಾಳಿ ಮಾಡಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ತಿಂಗಳು ಶಿವಮಾರಯ್ಯ ಎಂಬುವವರು ಹುಲಿ ದಾಳಿಗೆ ಬಲಿಯಾಗಿದ್ದರು. ಹಲವು ಜಾನುವಾರುಗಳು ಕೂಡ ಬಲಿಯಾಗಿದ್ದವು. ಆದರೂ, ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಳ್ಳದ ಪರಿಣಾಮ ಗ್ರಾಮಸ್ಥರು ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 