ಕೊಡಗಿನಲ್ಲಿ ಮತ್ತೊಂದು ಸೋಂಕಿತ ಪ್ರಕರಣ ಪತ್ತೆ, ಉಡುಪಿಯಲ್ಲಿ 18 ಮಂದಿಗೆ ಸೋಂಕು ದೃಢ
ಉಡುಪಿ/ಬೆಂಗಳೂರು, ಮಾ 24, ಉಡುಪಿ ಜಿಲ್ಲೆಯಲ್ಲಿ ಒಂದು ವರ್ಷದ ಮಗು, ನಾಲ್ಕು ವರ್ಷದ ಇಬ್ಬರು ಬಾಲಕರು ಸೇರಿ ಭಾನುವಾರ 18 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಂಟೈನ್‌ಮೆಂಟ್ ವಲಯಕ್ಕೆ ಭೇಟಿ ನೀಡಿದ್ದ ಇಬ್ಬರಲ್ಲಿ ಹಾಗೂ ಮಹಾರಾಷ್ಟ್ರದಿಂದ ಬಂದ 14 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಬ್ಬರು ಸೋಂಕಿತರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ ಎಂದು ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನೊಂದೆಡೆ ಕೊಡಗು ಜಿಲ್ಲೆಯಲ್ಲಿ ಈಗ ಮತ್ತೊಂದು ಪ್ರಕರಣ ವರದಿಯಾಗಿದೆ. ಸೋಮವಾರಪೇಟೆ ತಾಲ್ಲೂಕಿನ 26 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಇದು ಜಿಲ್ಲೆಯಲ್ಲಿ ಕಂಡುಬಂದ ಮೂರನೇ ಪ್ರಕರಣವಾಗಿದೆ.ಮುಂಬೈನಲ್ಲಿ ಬ್ಯಾಂಕ್ ಉದ್ಯೋಗಿ ಇವರು ಮೇ 20ರಂದು ಜಿಲ್ಲೆಯ ಸಂಪಾಜೆ ಚೆಕ್‌ಪೋಸ್ಟ್‌ಗೆ ಬಂದಿದ್ದರು. ಅಲ್ಲಿಂದ ಅವರನ್ನು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರು ಯಾವುದೇ ಸ್ಥಳಗಳಿಗೆ ಭೇಟಿ ಮಾಡಿಲ್ಲ. ಯಾರನ್ನೂ ಸಂಪರ್ಕಿಸಿಲ್ಲ ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 