ಭಯೋತ್ಪಾದನಾ ವಿರೋಧಿ ದಿನಾಚರಣೆ : ಪ್ರತಿಜ್ಞಾ ವಿಧಿ ಸ್ವೀಕಾರ
ಗದಗ 21: ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ಭಯೋತ್ಪಾದನಾ ವಿರೋಧಿ ದಿನಾಚರಣೆಯ ಅಂಗವಾಗಿ ಹಿಂಸೆ ಮತ್ತು ಭಯೋತ್ಪಾದನೆ ಮೆಟ್ಟಿ ಶಾಂತಿ, ಸೌಹಾರ್ದತೆ ಕಾಪಾಡುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜರುಗಿತು.
ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ನಾವು ಎಲ್ಲ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮ ಶಕ್ತಿ ಸಾಮರ್ಥ್ಯದಿಂದ ಎದುರಿಸಿ ಶಾಂತಿ, ಸಾಮಾಜಿಕ ಸೌಹಾರ್ದತೆ ಸಾಧಿಸಿ ವಿಚ್ಛಿದ್ರಕಾರಿ ಶಕ್ತಿಗಳೊಡನೆ ಹೋರಾಡುವ ಪಣ ತೊಡುವ ಪ್ರಮಾಣ ವಚನ ಬೋಧಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಎಂ, ಕಂದಾಯ ಇಲಾಖೆಯ ಶಿರಸ್ತೇದಾರರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.