ಆಲಮೇಲ ಪಟ್ಟಣದಲ್ಲಿ ಮಾದಕ ದ್ರವ್ಯ ವಿರೋಧಿ ಜಾಗ್ರತೆ ಜಾಥಾ; ಅರವಿಂದ್ರ ಅಂಗಡಿ ಕಠಿಣ ಸಂದೇಶ..
Anti-drug awareness rally in Alamela town; Aravindra Angadi sends a strong message..
ಆಲಮೇಲ 23 : ಮಾದಕ ದ್ರವ್ಯಗಳ ದುಬ್ಬಳಕ್ಕೆ ಹಾಗೂ ಅಕ್ರಮ ಸಾಗಾಣಿಕೆ ತಡೆಗಟ್ಟುವ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಆಲಮೇಲ ಪೊಲೀಸ್ ಠಾಣೆಯ ವತಿಯಿಂದ ಜಾಗೃತಿ ಜಾಥಾ ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಆಲಮೇಲ ಪಟ್ಟಣದ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆಯ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ಮಾದಕ ವ್ಯಸನದ ದುಷ್ಟರಿಣಾಮಗಳು ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು ಆಲಮೇಲ ಠಾಣೆಯ ಪಿಎಸ್‌ಐ ಅರವಿಂದ್ ಅಂಗಡಿ ಇತ್ತೀಚಿನ ದಿನಗಳಲ್ಲಿ ಯುವಕರು ಡ್ರಗ್ಸ್ ಗಾಂಜಾ ಸಿಗರೇಟ್ ಹಾಗೂ ಇತರ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿರುವುದು ಅತಂಕಾರಿ ಬೆಳವಣಿಗೆಯಾಗಿದೆ. ಸಮಾಜವನ್ನು ಈ ಕೆಟ್ಟ ಚಟಗಳಿಂದ ಮುಕ್ತಿಗೊಳಿಸಲು ಸಾರ್ವಜನಿಕರು ಹಾಗೂ ಪೊಲೀಸ್ ಇಲಾಖೆ ಕೈಜೋಡಿಸಿ ಕಾರ್ಯ ನಿರ್ವಹಿಸಬೇಕಾಗಿದೆ ಎಂದು ಕರೆ ನೀಡಿದರು. ಜಾಗೃತಿ ಜಾಥಾವು ಊರಿನ ಪ್ರಮುಖ ಬೀದಿಗಳ ಮುಖಾಂತರ ಜನಜಾಗೃತಿ ಮೂಡಿಸಿದರು ಆಲಮೇಲ ಪಿಎಸ್‌ಐ ಅರವಿಂದ್ ಅಂಗಡಿ ನೇತೃತ್ವದಿಂದ.
"ವಿದ್ಯಾರ್ಥಿಗಳು ಘೋಷಣೆಯೊಂದಿಗೆ ಮಾದಕ ವಸ್ತುಗಳನ್ನು ನಿಷೇಧಿಸಿ ಜೀವ ಕಾಪಾಡಿ ಎಂಬ ಘೋಷದೊಂದಿಗೆ ಜನಜಾಗ್ರತಿ ಮೂಡಿಸಿದರು ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಮಾದಕ ವಸ್ತುಗಳಿಗೆ ಮೊರೆ ಹೋಗುತ್ತಿರುವುದರಿಂದ ತಡೆಗಟ್ಟಲು ಈ ಜನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಆಲಮೇಲ ಠಾಣೆಯ ಪಿಎಸ್‌ಐ ಅರವಿಂದ್ ಅಂಗಡಿ . ಸಿಬ್ಬಂದಿ ಪ್ರೊಫೆಷನಲ್ ಪಿಎಸ್‌ಐ ಅನಿಲ್. ಸಿದ್ರಾಯ ಪಾಟೀಲ. ಎಚ್. ಟಿ ಗೋಡೆಕರ್. ಹಾಗೂ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಈ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 