ಮುಂದಗೋಡ

ಮಲೇರಿಯಾ ವಿರೋಧಿ ಮಾಸಾಚರಣೆ

ಮಲೇರಿಯಾ ವಿರೋಧಿ ಮಾಸಾಚರಣೆ

ಮುಂಡಗೋಡ:ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಶುಕ್ರವಾರ ಪಟ್ಟಣದ ಮನೆ-ಮನೆಗೆ ತೆರಳಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.  

ಡೆಂಗ್ಯೂ ನಿಯಂತ್ರಣಕ್ಕಾಗಿ ಮನೆ-ಮನೆಗೆ ತೆರಳಿ ಲಾರ್ವಾ ಸಮೀಕ್ಷೆ ನಡೆಸಲಾಯಿತು. ಸಾರ್ವಜನಿಕರಿಗೆ ಕರಪತ್ರಗಳನ್ನು ವಿತರಿಸಿ ಮಲೇರಿಯಾ, ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾ ಕುರಿತು ಆರೋಗ್ಯ ಶಿಕ್ಷಣ ನೀಡಲಾಯಿತು. ಟಾಯರ್ ಅಂಗಡಿಗಳಿಗೆ ಭೇಟಿ ನೀಡಿ ಟಾಯರ್‌ಗಳನ್ನು ಖಾಲಿ ಮಾಡಿಸಿ ಜಾಗೃತಿ ಮೂಡಿಸಲಾಯಿತು.   

ಈ ವೇಳೆ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಶೈಲ ಪಟ್ಟಣಶೆಟ್ಟಿ, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿಗಳಾದ ವಿ.ಬಿ.ಕುರ್ಡೇಕರ, ಮರಿಯಮ್ಮ, ನಾಗಯ್ಯ ಹಿರೇಮಠ, ಆರೋಗ್ಯ ನೀರೀಕ್ಷಣಾಧಿಕಾರಿಗಳಾದ ಪ್ರಸಾದ ಎ., ಅಶೋಕ, ಕರಿಬಸಪ್ಪ ಎ.ಸಿ., ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. 


ಸುದ್ದಿ ಓದಿ