29ರಂದು ಮಲೇರಿಯಾ ವಿರೋಧಿ ಮಾಸಾಚರಣೆ
ಬಳ್ಳಾರಿ 26: ನಗರದ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜೂ. 29ರಂದು ಬೆಳಗ್ಗೆ 9ಕ್ಕೆ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಆರೋಗ್ಯಧಿಕಾರಿ ಡಾ. ಮೋಹನ್ ಕುಮಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.