ಪಕ್ಷ ವಿರೋಧಿ ಚಟುವಟಿಕೆ: ಇಬ್ಬರು ಸದಸ್ಯರನ್ನು ಬಿಜೆಪಿ ಪಕ್ಷದಿಂದ ವಜಾ
Anti-party activities: Two members expelled from BJP party
ಶಿರಹಟ್ಟಿ, ಜು.20: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದ ಮೇರೆಗೆ ಮಂಜುನಾಥ್ ಮಾಗಡಿ ಹಾಗೂ ಹೊನ್ನಪ್ಪ ವಡ್ಡರ್ ಅವರನ್ನು ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ ಎಂದು ಬಿಜೆಪಿ ಶಿರಹಟ್ಟಿ ಮಂಡಲ ಅಧ್ಯಕ್ಷ ಸುನೀಲ್ ಮಹಾಂತಶೆಟ್ಟರ್ ತಿಳಿಸಿದ್ದಾರೆ.
ಸೋಮವಾರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಇಬ್ಬರೂ ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದು, ಪಕ್ಷದ ಶಾಸಕರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸುವ ಮೂಲಕ ಪಕ್ಷಕ್ಕೆ ಹಾನಿ ಉಂಟುಮಾಡುವ ಕೆಲಸ ಮಾಡುತ್ತಿದ್ದರು ಎಂದು ಆರೋಪಿಸಿದರು.
ಜುಲೈ 9ರಂದು ನಡೆದ ಕೋರ್ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಕ್ಷೇತ್ರದಲ್ಲಿ ಗೊಂದಲದ ವಾತಾವರಣ ಸೃಷ್ಟಿಸುವುದು, ಕಾರ್ಯಕರ್ತರಲ್ಲಿ ಭಿನ್ನಾಭಿಪ್ರಾಯ ಉಂಟುಮಾಡುವುದು ಹಾಗೂ ಪಕ್ಷದ ಸಂಘಟನೆಗೆ ಧಕ್ಕೆ ತರುವ ರೀತಿಯ ಚಟುವಟಿಕೆಗಳಲ್ಲಿ ಅವರು ತೊಡಗಿದ್ದರು ಎಂದು ಹೇಳಿದರು.
ಇದಲ್ಲದೆ, 2023ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯ ಪರವಾಗಿ ಬಹಿರಂಗವಾಗಿ ಕೆಲಸ ಮಾಡಿದ್ದರೂ ಆರೋಪಿಸಲಾಗಿದೆ. ಈ ಎಲ್ಲ ಕಾರಣಗಳನ್ನು ಪರಿಗಣಿಸಿ ಪಕ್ಷದ ಶಿಸ್ತು ಕಾಪಾಡುವ ಉದ್ದೇಶದಿಂದ ಇಬ್ಬರನ್ನೂ ಪಕ್ಷದಿಂದ ವಜಾಗೊಳಿಸಲಾಗಿದೆ ಎಂದು ಸುನೀಲ್ ಮಹಾಂತಶೆಟ್ಟರ್ ತಿಳಿಸಿದರು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 