ಹಡಪದ ಅಪ್ಪಣ್ಣ ಜಯಂತಿ ಆಚರಣೆ
Appanna Jayanti celebration in Hadapada
ಲೋಕದರ್ಶನ ವರದಿ
ಕಾರವಾರ 29: ಹನ್ನೆರಡನೇ ಶತಮಾನದ ಶ್ರೇಷ್ಠ ವಚನಕಾರರಲ್ಲಿ ಒಬ್ಬರಾದ ಶಿವಶರಣ ಹಡಪದ ಅಪ್ಪಣ್ಣನವರು , ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುವ ಮೂಲಕ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಗೆ ಅಮೂಲ್ಯ ಕೊಡುಗೆ ನೀಡಿದ ಚೇತನರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿಯ ಚುನಾವಣೆ ಶಾಖೆಯ ತಹಶೀಲ್ದಾರರು ಪ್ರಮೋದ ನಾಯ್ಕ ಹೇಳಿದರು.
ಅವರು ಬುಧವಾರ ಕರ್ನಾಟಕ ರಾಜ್ಯ ಸರಕಾರಿ ನೌಕರರ ಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಹಡಪದ ಅಪ್ಪಣ್ಣ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.
ಕಾರವಾರದ ಶಿವಾಜಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎ.ಜಿ. ಕೆರಲೇಕರ ಹಡಪದ ಅಪ್ಪಣ್ಣ ಅವರು ಕುರಿತು ಉಪನ್ಯಾಸ ನೀಡಿ, ಹಡಪದ ಅಪ್ಪಣ್ಣನವರು ಕಾಯಕವೇ ಕೈಲಾಸ, ಸಮಾನತೆ, ಸೇವೆ ಹಾಗೂ ಮಾನವೀಯತೆಯ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡ ಮಹಾನ್ ಶಿವಶರಣರಾಗಿದ್ದರು. ಅಲ್ಲಮ ಪ್ರಭುಗಳು ಅವರಿಗೆ "ನಿಜಸುಖಿ" ಎಂಬ ಬಿರುದು ನೀಡಿದ್ದು, ದುರಾಸೆ ತೊರೆದು ಎಲ್ಲರನ್ನೂ ಪ್ರೀತಿಸಿ, ಸೇವೆ ಮಾಡುವ ಮೂಲಕ ಜೀವನ ಸಾರ್ಥಕವಾಗುತ್ತದೆ ಎಂಬ ಸಂದೇಶವನ್ನು ಅವರು ಸಾರಿದರು.
ಗುರುಭಕ್ತಿ, ಕರ್ತವ್ಯನಿಷ್ಠೆ ಹಾಗೂ ಸಮಾಜಸೇವೆಯಲ್ಲಿ ಹಡಪದ ಅಪ್ಪಣ್ಣನವರ ಜೀವನ ಇಂದಿನ ಪೀಳಿಗೆಗೆ ಮಾದರಿಯಾಗಿದೆ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜೀವ್ ಕುಮಾರ, ಸಮಾಜದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 