ಮುಂಡರಗಿ

ಕೋಮು ಗಲಭೆಗೆ ಪ್ರಚೋದನೆ ಹೇಳಿಕೆಗೆ ಕ್ರಮಕ್ಕೆ ಆಗ್ರಹಿಸಿ ಮನವಿ

ಕೋಮು ಗಲಭೆಗೆ ಪ್ರಚೋದನೆ ಹೇಳಿಕೆಗೆ ಕ್ರಮಕ್ಕೆ ಆಗ್ರಹಿಸಿ ಮನವಿ


ಲೋಕದರ್ಶನ ವರದಿ 

ಮುಂಡರಗಿ 12:  ಕರ್ನಾಟಕ ಸರಕಾರ ಗೃಹಮಂತ್ರಿ ಅರಗ ಜ್ಞಾನೇಂದ್ರ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಇವರು ಕೋಮು ಗಲಭೆಗೆ ಪ್ರಚೋದನೆ ನೀಡುವ ಹೇಳಿಕೆಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕೆಪಿಸಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಸೋಮವಾರ ಪ್ರತಿಭಟನೆ ಮಾಡುವುದರ ಮೂಲಕ ತಹಶಿಲ್ದಾರ ಮುಖಾಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. 

ಈ ವೇಳೆ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಮಾತನಾಡಿ, ಈಡಿ ರಾಜ್ಯದಲ್ಲಿ ಪೆಟ್ರೊಲ್, ಡಿಸೆಲ್ ಹಾಗೂ ಅಡುಗೆ ಎಣ್ಣೆಯ ಬೆಲೆ ಏರಿಕೆಯ ಜೊತೆಯಲ್ಲಿ ಗೃಹಮಂತ್ರಿ ಅರಗ ಜ್ಞಾನೇಂದ್ರ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಇವರು ಕೋಮು ಗಲಭೆಗೆ ಪ್ರಚೋದನೆ ನೀಡುವ ಹೇಳಿಕೆಯ ವಿರುದ್ಧ ಖಂಡಿಸುತ್ತೇವೆ. ದೇಶದ ಹಾಗೂ ರಾಜ್ಯದಲ್ಲಿರುವ ಎಲ್ಲರೂ ಸೌಹಾರ್ದತೆಯಿಂದ ಬಾಳುವ ವ್ಯವಸ್ಥೆಯಾಗಬೇಕು. ಹೀಗಾಗಿ ಯಾರೇ ಇರಲಿ ಅಂತವರ ವಿರುದ್ಧ ಎಫ್‌ಐಆರ್ ಹಾಕಿ ಕ್ರಮಿನಲ್ ಕೇಸು ದಾಖಲಿಸಬೇಕೆಂದು ಆಗ್ರಹಿಸಿದರು. 

ಕಾಂಗ್ರೇಸ್ ಹಿರಿಯ ಮುಖಂಡ ವಿ.ಎಲ್‌.ನಾಡಗೌಡ ಮಾತನಾಡಿ, ರಾಜ್ಯದಲ್ಲಿ ಈ ಇಬ್ಬರು ರಾಜ್ಯದ ಜನತೆಯನ್ನು ದಿಕ್ಕು ತಪ್ಪಿಸುವುದರ ಮೂಲಕ  ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ಕುತ್ತು ತರುವಂತ ಹೇಳಿಕೆಯನ್ನು ಹೇಳಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಯಾರೇ ಆಗಲಿ ತಪ್ಪು ಹೇಳಿಕೆ ನೀಡಿದವರ ವಿರುದ್ಧ ಸೂಕ್ತವಾದ ಕಾನೂನು ಕ್ರಮವನ್ನು ಜರುಗಿಸಬೇಕೆಂದು ಒತ್ತಾಯಿಸಿದರು. 

ಮಾಜಿ ಎಪಿಎಂಸಿ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ್ ಮಾತನಾಡಿ, ಅಮಿತ್‌-ಷಾ ಹಾಗೂ ಅರಗ ಜ್ಞಾನೇಂದ್ರರವರು ಇಬ್ಬರೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಗೃಹಮಂತ್ರಿಗಳಾಗಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಂತವರು. ಇಂತವರಲ್ಲಿ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರ ಹೇಳಿಕೆ ರಾಜ್ಯದ ಜನರ ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ. ಇವರನ್ನು ಕೂಡಲೇ ರಾಜ್ಯಪಾಲರು ಹಾಗೂ ರಾಷ್ಟ್ರಪತಿಗಳು ಭಾಗಿಯಾಗಿ ಅವರನ್ನು ಕೂಡಲೇ ಅವರ ಸ್ಥಾನದಿಂದ ವಜಾಗೊಳಿಸಬೇಕು ಎಂದು ಹೇಳಿದರು. 

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರ ಕಲಾಲ, ಕಾಂಗ್ರೇಸ್ ಮಹಿಳಾ ಅಧ್ಯಕ್ಷೆ ಜೋತಿ ಕುರಿ ಹಾಗೂ ಎಸ್‌.ಡಿ.ಮಕಾಂದರ ಮಾತನಾಡಿದರು. ಈ ವೇಳೆ ಉಪ ತಹಶಿಲ್ದಾರ ಮನವಿಯನ್ನು ಸ್ವೀಕರಿಸಿದರು. 

ಈ ಸಂದರ್ಭದಲ್ಲಿ ವೈ.ಎನ್‌.ಗೌಡರ, ಹೇಮಂತಗೌಡ ಪಾಟೀಲ್, ರುದ್ರಗೌಡ ಪಾಟೀಲ್, ರಾಘು ಕುರಿ, ಸುರೇಶ ಮಾಗಡಿ, ಯಲ್ಲಪ್ಪ ಹೊಂಬಳಗಟ್ಟಿ, ಗಣೇಶ ಭರಮಕ್ಕನವರ, ಮಂಜುನಾಥಗೌಡ ಗೌಡ್ರ, ರಾಮು ಭಂಜಂತ್ರಿ, ವೀರಣ್ಣ ಗಟ್ಟಿ, ಯಲ್ಲಪ್ಪ ಹೂಲಗೇರಿ, ಪ್ರತಿಭಾ ಹೊಸಮನಿ ಹಾಗೂ ಇತರೆ ಕಾಂಗ್ರೇಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 


ಸುದ್ದಿ ಓದಿ