ಜಮಖಂಡಿ

ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘ ತಾಲೂಕ ಘಟಕದಿಂದ ಮನವಿ

ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘ ತಾಲೂಕ ಘಟಕದಿಂದ ಮನವಿ

ಜಮಖಂಡಿ 06:  2017 ರಲ್ಲಿ ನೇಮಕವಾದ ಶಿಕ್ಷಕರನ್ನು 1 ರಿಂದ 7ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಿ, ಹೊಸ ವೃಂದ ಮತ್ತು ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು ಹಾಗೂ ಯಾವುದೇ ಕಾರಣಕ್ಕೂ 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ ಪದವೀಧರ ಶಿಕ್ಷಕರೆಂದು ಪದನಾಮೀಕರಿಸಬೇಕೆಂದು ರಾಜ್ಯ ಸರಕಾರವನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘ ತಾಲೂಕ ಘಟಕದಿಂದ ಒತ್ತಾಯಿಸಿದರು. 

ನಗರದ ಮಿನಿವಿಧಾನಸೌಧ ತಾಲೂಕಡಳಿತ ಆವಣದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ. ನಂತರ ಉಪವಿಭಾಗಾಧಿಕಾರಿ ಶ್ವೇತಾ ಬೀಡೀಕರ ಹಾಗೂ ತಹಶೀಲ್ದಾರ ಸದಾಶಿವ ಮಕ್ಕೋಜಿ ಅವರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲಿಸಿದರು. 

ನಂತರ ಮಾತನಾಡಿದ ಅವರು, 2017 ರಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳು 2016 ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತ 1, 7,8 ಕ್ಕೆ ನೇಮಕ ಹೊಂದಿದವರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1, 5 ಕ್ಕೆ ಸೀಮಿತಗೊಳಿಸಿರುವುದನ್ನು ಹಿಂಪಡೆಯಬೇಕು. ಅರ್ಹ ವಿದ್ಯಾರ್ಹತೆ ಪೂರೈಸಿದ 2016ಕ್ಕಿಂತ ಮೊದಲು ನೇಮಕಾತಿಯಾದ ಎಲ್ಲಾ 1 ರಿಂದ 8ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆ ಮುಗಿಯುವವರೆಗೂ ಈ ಮೊದಲಿನಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢ ಶಾಲೆಗೆ ಬಡ್ತಿ ನೀಡಬೇಕು.ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು ಎಂದು ಸರಕಾರವನ್ನು ಒತ್ತಾಯಿಸಿದರು. 

ಇದೇ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ಬಾಗೇನವರ, ಸಿ,ಜಿ,ಕಡಕೋಳ, ಅಜ್ಜನ್ನವರ ಸೇರಿದಂತೆ ಅನೇಕ ಶಿಕ್ಷಕರು ಹಾಗೂ ಶಿಕ್ಷಕಿಯರು ಪ್ರತಿಭಟನೆಯಲ್ಲಿ ಭಾಗಿಯಾಗಿದರು. 


ಸುದ್ದಿ ಓದಿ