ಹೊಸಪೇಟೆ

ಹೊರಗುತ್ತಿಗೆ ನೌಕರರ ಕನಿಷ್ಠ ವೇತನ ಜಾರಿಗೊಳಿಸಲು ಡಿಸಿಗೆ ಮನವಿ

ಹೊರಗುತ್ತಿಗೆ ನೌಕರರ ಕನಿಷ್ಠ ವೇತನ ಜಾರಿಗೊಳಿಸಲು ಡಿಸಿಗೆ ಮನವಿ

ಲೋಕದರ್ಶನ ವರದಿ 

ಹೊಸಪೇಟೆ 11: ವಿಜಯನಗರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆ, ಕನ್ನಡ ವಿಶ್ವವಿದ್ಯಾಲಯ ಹಂಪಿ ಮುಂತಾದ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಸ್ಟೆಲ್ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಜವಾನರು, ಡಾಟಾ ಎಂಟ್ರಿ ಆಪರೇಟರ್ ಮುಂತಾದ ಹೊರಗುತ್ತಿಗೆ ಸಿಬ್ಬಂದಿಗಳಿಗೆ ಕಾರ್ಮಿಕ ಇಲಾಖೆ ಕನಿಷ್ಠ ವೇತನದ ಜಾರಿಗಾಗಿ ಅಂತಿಮ ಅಧಿಸೂಚನೆಯನ್ನು ದಿನಾಂಕ : 22.05.2026 ರಂದು ಹೊರಡಿಸಿದೆ.  ಈ ಅಂತಿಮ ಅಧಿಸೂಚನೆಯನ್ನು ನಿಯಮಾನುಸಾರ ತಕ್ಷಣ ಜಾರಿ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಕ್ತ ಕ್ರಮಗೊಳ್ಳಲು ಮನವಿ ಸಲ್ಲಿಸಿದರು. 


ಸುದ್ದಿ ಓದಿ