ಶಾಸಕ ಹಿಟ್ನಾಳ ಅವರಿಗೆ ಮುಸ್ಲಿಂ ಸಮುದಾಯದ ವಿವಿಧ ಅಭಿವೃದ್ಧಿ ಬೇಡಿಕೆಗಳ ಮನವಿ
Appeal to MLA Hitnal regarding various development demands of Muslim community
ಕೊಪ್ಪಳ : ಮುಸ್ಲಿಂ ಸಮುದಾಯದ ಮೂಲಭೂತ ಹಕ್ಕುಗಳು ಮತ್ತು ಅಭಿವೃದ್ಧಿ ಸಂಬಂಧಿತ ವಿವಿಧ ಬೇಡಿಕೆಗಳನ್ನು ತ್ವರಿತವಾಗಿ ಈಡೇರಿಸುವಂತೆ ಒತ್ತಾಯಿಸಿ, ಕರ್ನಾಟಕ ಮುಸ್ಲಿಂ ಯುನಿಟಿ ಕೊಪ್ಪಳ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಮುಸ್ಲಿಂ ಮುಖಂಡರು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ನಗರದಲ್ಲಿ ನಡೆದ ಈ ಭೇಟಿ ವೇಳೆ ಯುನಿಟಿಯ ರಾಜ್ಯ ಸಮಿತಿ ಸದಸ್ಯ ಕೆ.ಎಂ. ಸಯ್ಯದ್ ಹಾಗೂ ಜಿಲ್ಲಾಧ್ಯಕ್ಷ ಎಂಡಿ ಜೀಲಾನ್ ಕಿಲ್ಲೆದಾರ್ ಅವರ ನೇತೃತ್ವದಲ್ಲಿ ಮುಖಂಡರು ಶಾಸಕರಿಗೆ ಮನವಿ ಸಲ್ಲಿಸಿ, ಸಮುದಾಯದ ದೀರ್ಘಕಾಲದ ಬೇಡಿಕೆಗಳನ್ನು ಗಮನಕ್ಕೆ ತಂದರು.
ಮನವಿಯಲ್ಲಿ ಪ್ರಮುಖವಾಗಿ ಈದ್ಗಾ ಸ್ಥಳ ವಿಸ್ತರಣೆಗಾಗಿ 2 ಎಕರೆ ಭೂಮಿ ಮಂಜೂರು ಮಾಡಬೇಕು, ನಗರದಲ್ಲಿನ ಜನಸಂಖ್ಯೆಗೆ ಅನುಗುಣವಾಗಿ ಖಬರಸ್ಥಾನ (ಸ್ಮಶಾನ)ಕ್ಕಾಗಿ 5 ಎಕರೆ ಜಾಗ ಒದಗಿಸಬೇಕು, ಮತ್ತು ರಾತ್ರಿ ವೇಳೆಯ ದಫನ್ ಕಾರ್ಯಗಳಿಗೆ ಅನುಕೂಲವಾಗುವಂತೆ ಹೈಮಾಸ್ ದೀಪಗಳನ್ನು ಅಳವಡಿಸಬೇಕು ಎಂದು ಒತ್ತಾಯಿಸಲಾಯಿತು.
ಇದೇ ವೇಳೆ ಮೌಲಾನಾ ಆಜಾದ್ ಶಾಲೆ ಮತ್ತು ಕಾಲೇಜುಗಳಿಗಾಗಿ ಸ್ವಂತ ಜಾಗದಲ್ಲಿ ಆಧುನಿಕ ಸೌಲಭ್ಯಗಳಿರುವ ಕಟ್ಟಡ ಹಾಗೂ ಆಟದ ಮೈದಾನ ನಿರ್ಮಿಸಲು ಭೂಮಿ ಖರೀದಿ ಮಾಡಬೇಕು, ಅಂಚೆ ಕಚೇರಿ ಹತ್ತಿರದ ಹಳೆಯ ಉರ್ದು ಪ್ರೌಢಶಾಲಾ ಕಟ್ಟಡ ಶಿಥಿಲಗೊಂಡಿರುವುದರಿಂದ ಹೊಸ ಕಟ್ಟಡ ನಿರ್ಮಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಯಿತು.
ಹಜರತ್ ಮರ್ದಾನೆ ಗೈಬ್ ದರ್ಗಾದ ಶಾದಿಮಹಲ್ ಕಾಮಗಾರಿ ವರ್ಷಗಳಿಂದ ನಿಧಾನಗತಿಯಲ್ಲಿ ಸಾಗುತ್ತಿದ್ದು, ಅದನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಎಂಬ ಬೇಡಿಕೆಯನ್ನು ಕೂಡ ಸಲ್ಲಿಸಲಾಯಿತು.
ಜೊತೆಗೆ ದರ್ಗಾ ಮತ್ತು ಹುಲಿಕೇರಿ ಕಡೆಗೆ ಹೋಗುವ ಮುಖ್ಯ ರಸ್ತೆಯ ಎರಡೂ ಬದಿಯಲ್ಲಿ ಸುರಕ್ಷತಾ ತಡೆಗೋಡೆ ನಿರ್ಮಾಣ ಹಾಗೂ ದರ್ಗಾದ ಮೋತಿ ಕೆರೆಯನ್ನು ಅಭಿವೃದ್ಧಿಪಡಿಸಿ ಪ್ರವಾಸಿ ತಾಣವನ್ನಾಗಿ ರೂಪಿಸಬೇಕೆಂದು ಮನವಿಯಲ್ಲಿ ಉಲ್ಲೇಖಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಮುಸ್ಲಿಂ ಯುನಿಟಿ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು, ಮಾಜಿ ಜನಪ್ರತಿನಿಧಿಗಳು ಹಾಗೂ ಸಮುದಾಯದ ಹಿರಿಯ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 