ಮುದ್ದೆಬಿಹಾಲ್

7ನೇ ವೇತನ ಜಾರಿಗೆ ಆಗ್ರಹಿಸಿ ಶಾಸಕ ನಾಡಗೌಡರಿಗೆ ಮನವಿ

7ನೇ ವೇತನ ಜಾರಿಗೆ ಆಗ್ರಹಿಸಿ ಶಾಸಕ ನಾಡಗೌಡರಿಗೆ ಮನವಿ

ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾ ಘಟಕದಿಂದ 

ಮುದ್ದೇಬಿಹಾಳ 11: ರಾಜ್ಯದ ಎಲ್ಲ ಸರಕಾರಿ ನೌಕರರಿಗೆ 7ನೇ ವೇತನ ಜಾರಿಗೊಳಿಸುವುದು ಸೇರಿದಂತೆ ಇತರೇ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾ ಘಟಕದಿಂದ ಶಾಸಕ ಹಾಗೂ ಕರ್ನಾಟಕ ರಾಜ್ಯದ ಸಾಭೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ(ಅಪ್ಪಾಜಿ)ಯವರಿಗೆ  ಹಾಗೂ ತಹಶಿಲ್ದಾರ ಬಲರಾಮ ಕಟ್ಟಿಮನಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಬುಧವಾರ ಮನವಿ ಸಲ್ಲಿಸಿದರು. 

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದ ಎಲ್ಲಾ 31 ಕಂದಾಯ ಜಿಲ್ಲೆ. 03 ಶೈಕ್ಷಣಿಕ ಜಿಲ್ಲೆ ಹಾಗೂ 183 ತಾಲ್ಲೂಕುಗಳಲ್ಲಿ ಸಂಘದ ಶಾಖೆಗಳನ್ನು ಹೊಂದಿದ್ದು, ಸಮಸ್ತ 6ಲಕ್ಷ ರಾಜ್ಯ ಸಕಾರಿ ನೌಕರರನ್ನು ಪ್ರತಿನಿಧಿಸುವ ಏಕೈಕ ಬೃಹತ್ ಸಂಘಟನೆಯಾಗಿರುತ್ತದೆ. ಸಂಘವು ರಾಷ್ಟ್ರ ಹಾಗೂ ರಾಜ್ಯದಲ್ಲಿ ಸಂಭವಿಸುವ ಪ್ರಕೃತಿ ವಿಕೋಪ, ಉತ್ತರ ಕರ್ನಾಟಕದ ಪ್ರವಾಹ, ಕೋವಿಡ್ ಸಂಕಷ್ಟದಲ್ಲಿ ಸರ್ಕಾರಕ್ಕೆ ಆರ್ಥಿಕ ಸಹಕಾರ ನೀಡಿ ಸೆವಾ ಕಾರ್ಯ ನಿರ್ವಹಿಸುವ ಮೂಲಕ ದೇಶದಲ್ಲಿಯೇ ಮಾದರಿ ಸಂಘಟನೆಯಾಗಿದೆ. 

ತಲುಪಿಸುವ ಕಾರ್ಯದ ಹಾಗೂ ರಾಜ್ಯದಲ್ಲಿ 2.60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ಸಹ ಸರ್ಕಾರವು ಜನ ಸಾಮನ್ಯರ ಕಲ್ಯಾಣ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸುವ ಯೋಜನೆಗಳನ್ನು ಎಲ್ಲ ಸಾಮನ್ಯರಿಗೆ ಜೊತೆ ರಾಜ್ಯದ ಅಭಿವೃದ್ಧಿ ಸೂಚ್ಯಾಂಕದ ಬೆಳವಣಿಗೆಯಲ್ಲಿ ಜಿ.ಎಸ್‌.ಟಿ.ತೆರಿಗೆ ಸಂಗ್ರಹಣೆಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಲು ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ. ಇಂತಹ ಕಾರ್ಯಾ ಚಟುವಟಿಕೆಯನ್ನು ಹೊಂದಿದ ಸರಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವದು ಸರ್ಕಾರದ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರಿ ಆದೇಶ ಹೊರಡಿಸುವದು. ಸಂಘದ ಒತ್ತಡದ ಹಿನ್ನೆಲೆಯಲ್ಲಿ ಈ ಹಿಂದಿನ ಸರ್ಕಾರವು ದಿನಾಂಕ: 19-11-2022 ರಂದು ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ಕೆ.ಸುಧಾಕರ್‌ರಾವ್ ಇವರ ಅಧ್ಯಕ್ಷತೆಯಲ್ಲಿ ರಾಜ್ಯ 7ನೇ ವೇತನ ಆಯೋಗವನ್ನು ರಚಿಸಿ, ಆರು ತಿಂಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲು ಆದೇಶಿಸಿತ್ತು. ಬಳಿಕ ವೇತನ ಆಯೋಗವು ದಿ:16-3-2024 ರಂದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದ್ದು, ವೇತನ ಆಯೋಗ ರಚನೆಯಾಗಿ ಇಂದಿಗೆ 19 ತಿಂಗಳು ಕಳೆದಿರುತ್ತದೆ.  ರಾಜ್ಯ ಸರ್ಕಾರಿ ನೌಕರರ ವೇತನ-ಭತ್ಯೆಗಳ ಸಂಬಂಧ ಸಮಗ್ರ ವರದಿಯನ್ನು ಸಿದ್ಧಪಡಿಸಿ ಶೇ.40 ಫಿಟ್‌ಮೆಂಟ್ ಸೌಲಭ್ಯ ನೀಡಲು ಮನವಿಯನ್ನು ಸಲ್ಲಿಸಲಾಗಿತ್ತು.  

 ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಸಮಾವೇಶವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿ, ಸಮ್ಮೇಳನದಲ್ಲಿ ಭಾಗವಹಿಸಿದ್ದ 2.50 ಲಕ್ಷ ಸರ್ಕಾರಿ ನೌಕರರ ಸಮ್ಮುಖದಲ್ಲಿ ರಾಜ್ಯ 7ನೇ ವೇತನ ಆಯೋಗವು ವರದಿ ನೀಡಿದ ನಂತರ ಅನುಷ್ಠಾನಗೊಳಿಸುವ ಸ್ಪಷ್ಟ ಭರವಸೆಯನ್ನು ನೀಡಿರುತ್ತಾರೆ. ಇಲ್ಲಿಯ ತನಕವೂ ನಮ್ಮ ಬೇಡಿಕೆ ಇಡೇರಿಸಿಲ್ಲ ಸಧ್ಯ .ಎನ್‌.ಪಿ.ಎಸ್‌. ರದ್ದುಪಡಿಸಿ ಹಳೇ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಬೇಕು ಜೊತೆಗೆ ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ (ಕೆ.ಎ.ಎಸ್‌.ಎಸ್) ಅನುಷ್ಠಾನಗೊಳಿಸುವ ಮೂಲಕ ನಮ್ಮ ಬೇಡಿಕೆ ತೀವ್ರಗತಿಯಲ್ಲಿ ಈಡೇರಿಸುವ ಮೂಲಕ ನಮಗೆ ಸಾಮಾಜಿಕ ನ್ಯಾಯ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. 

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಎಸ್‌.ಆರ್‌. ಕಟ್ಟಿಮನಿ, ಕಾರ್ಯದರ್ಶಿ ಬಿ.ಎಸ್‌. ಹೊಳಿ, ರಕರ್ನಾಟಕ ರಾಜ್ಯ ಪ್ರಾಥಮೀಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ. ಎಚ್ ಮುದ್ನೂರ, ಎನ್‌. ಎಸ್ ತುರಡಗಿ, ಅರವಿಂದ ಹೂಗಾರ, ವೆಂಕಟೇಶ ಅಂಬಿಗೇರ, ಸಿ.ಜಿ ನಾಗರಬೇಟ್ಟ, ಎಸ್‌. ಆರ್ ಕಟ್ಟಿಮನಿ, ಐ.ಎ.ಹಿರೇಮಠ, ಆನಂದ ಬಿರಾದಾರ, ಸುಮೀತ್ರಾ ಹಗರಗೊಂಡ, ಸಂಗಮೇಶ ಹಿರೇಮಠ, ಎಸ್‌.ಜಿ ಹಂದ್ರಾಳ, ಬಿ.ಎಚ್ ಭಗವತಿ,  ಬಿ.ವಿ ಕಂಠಿ, ವಿಠ್ಠಲ, ಕಿಲಾರಟ್ಟಿ, ಕೆ.ಎಸ್ ಕಶಿನಕುಂಟಿ, ಎಂ. ಎಸ್ ಗೌಡರ, ಎಂ.ಬಿ ಪಾಟೀಲ, ಎಸ್‌.ಎಸ್ ಕುಂಬಾರ  ಸೇರಿದಂತೆ ಹಲವರು ಇದ್ದರು. 


ಸುದ್ದಿ ಓದಿ