ಆಸ್ಪತ್ರೆ ಮೇಲ್ದರ್ಜೆಗೇರಿಸುವಂತೆ ಶಾಸಕ ನಾಡಗೌಡರಿಗೆ ಮನವಿ
Appeal to MLA Nadagowda to upgrade the hospital
ಆಸ್ಪತ್ರೆ ಮೇಲ್ದರ್ಜೆಗೇರಿಸುವಂತೆ ಶಾಸಕ ನಾಡಗೌಡರಿಗೆ ಮನವಿ
ತಾಳಿಕೋಟಿ 31: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಕ್ರಮ ವಹಿಸುವಂತೆ ಒತ್ತಾಯಿಸಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಅಪ್ಪಾಜಿ ನಾಡಗೌಡ ಇವರಿಗೆ ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಪದಾಧಿಕಾರಿಗಳು ಬುಧವಾರ ಮನವಿ ಸಲ್ಲಿಸಿದರು. ಫೌಂಡೇಶನ್ ಅಧ್ಯಕ್ಷ ಮೊಹಮ್ಮದ್ ಶಫೀಕ ಇನಾಮದಾರ ಅವರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿರುವ ಹಲವು ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದು ಇವುಗಳ ಪರಿಹಾರಕ್ಕಾಗಿ ಆದಷ್ಟು ಬೇಗ ಕ್ರಮವಹಿಸುವಂತೆ ಮನವಿ ಮಾಡಿಕೊಂಡರು. ಮನವಿ ಪತ್ರ ಸ್ವೀಕರಿಸಿದ ಶಾಸಕ ಅಪ್ಪಾಜಿ ನಾಡಗೌಡರು ಮಾತನಾಡಿ ತಾಳಿಕೋಟಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅತ್ಯಗತ್ಯವಾದ ಡಯಾಲಿಸಿಸ್ ಕೇಂದ್ರವನ್ನು ಕಳೆದ ವರ್ಷ ಆರಂಭಿಸಲು ಕ್ರಮವಹಿಸಿದ್ದೆ. ಇದರಿಂದ ಬಡವರಿಗೆ ಹೆಚ್ಚು ಅನುಕೂಲವಾಗಿದೆ. ಇದೇ ರೀತಿ ನಾಲತವಾಡದ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇತ್ತು ಅದನ್ನೂ ಸಹ ಸರಿಪಡಿಸಿದ್ದೇನೆ, ತಾಳಿಕೋಟಿ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕ ಆಸ್ಪತ್ರೆಯನ್ನಾಗಿ ಉನ್ನತಿಕರಿಸಿದರೆ ಬಹುತೇಕ ಇಲ್ಲಿಯ ಸಮಸ್ಯೆಗಳು ಪರಿಹಾರ ಆಗಲು ಸಾಧ್ಯವಿದೆ. ಈಗಾಗಲೇ ನಾನು ಈ ವಿಷಯವನ್ನು ಆರೋಗ್ಯ ಸಚಿವರ ಗಮನಕ್ಕೆ ತಂದಿದ್ದೇನೆ. ಈಗ ಇದನ್ನು ಮುಖ್ಯಮಂತ್ರಿಗಳ ಜೊತೆಯಲ್ಲಿ ಮಾತನಾಡಿ ಪರಿಹರಿಸಲು ಪ್ರಯತ್ನಿಸುತ್ತೇನೆ ಎಂದರು. ಅಂಬೇಡ್ಕರ್ ಸೇನೆ ತಾಲೂಕ ಅಧ್ಯಕ್ಷ ಗೋಪಾಲ ಕಟ್ಟಿಮನಿ, ಸಾಲಿಡಾರಿಟಿ ಯೂಥ್ ಮೂವಮೆಂಟ್ ಅಧ್ಯಕ್ಷ ಮೈನು ಮಕಾಂದಾರ, ಸದಸ್ಯ ಯಾಸೀನ ಬಾಗವಾನ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 