ಹೊಸಪೇಟೆಯಲ್ಲಿ ಕಟ್ಟಡ ಕಾರ್ಮಿಕರ ಭವನ ನಿರ್ಮಾಣಕ್ಕೆ ಶಾಸಕರಾದ ಶ್ರೀ ಹೆಚ್.ಆರ್. ಗವಿಯಪ್ಪ ಅವರಿಗೆ ಮನವಿ: ಸಕಾರಾತ್ಮಕ ಸ್ಪಂದನೆ
Appeal to MLA Shri H.R. Gaviyappa for construction of a building for construction workers in Hospet:
ಹೊಸಪೇಟೆ 21 : ನಗರದ ಕಟ್ಟಡ ಕಾರ್ಮಿಕರ ಬಹುಕಾಲದ ಬೇಡಿಕೆಯಾದ ‘ಕಟ್ಟಡ ಕಾರ್ಮಿಕರ ಭವನ' ನಿರ್ಮಾಣಕ್ಕೆ ಸಂಬಂಧಿಸಿದಂತೆ, ಹೊಸಪೇಟೆ ತಾಲೂಕು ಕಟ್ಟಡ ಕಾರ್ಮಿಕರ ಸಂಘದ ಮುಖಂಡರು ಇಂದು ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆವು.
ನಗರದಲ್ಲಿ ಸಾವಿರಾರು ಸಂಖ್ಯೆಯಲ್ಲಿರುವ ಕಟ್ಟಡ ಕಾರ್ಮಿಕರಿಗೆ ಸಭೆ-ಸಮಾರಂಭಗಳನ್ನು ನಡೆಸಲು, ಕಾರ್ಮಿಕರಿಗೆ ಅಗತ್ಯ ತರಬೇತಿ ನೀಡಲು ಹಾಗೂ ಕಾರ್ಮಿಕರ ಹಿತರಕ್ಷಣೆಗಾಗಿ ಪ್ರತ್ಯೇಕವಾದ ಭವನದ ಅಗತ್ಯವಿದೆ ಎಂದು ಸಂಘದ ಮುಖಂಡರು ಶಾಸಕರ ಗಮನಕ್ಕೆ ತಂದರು. ಕಾರ್ಮಿಕರ ಸಮಸ್ಯೆಗಳನ್ನು ಆಲಿಸಲು ಮತ್ತು ಅವರಿಗೆ ಸರ್ಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಒಂದು ಸುಸಜ್ಜಿತ ಭವನ ಅತ್ಯಗತ್ಯವಾಗಿದೆ ಎಂದು ಅವರು ಒತ್ತಾಯಿಸಿದರು.
ಶಾಸಕರ ಭರವಸೆ:
ಕಾರ್ಮಿಕರ ಮನವಿಯನ್ನು ಅತ್ಯಂತ ಸಕಾರಾತ್ಮಕವಾಗಿ ಸ್ವೀಕರಿಸಿದ ಶಾಸಕ ಹೆಚ್.ಆರ್. ಗವಿಯಪ್ಪ ಅವರು, ಕಟ್ಟಡ ಕಾರ್ಮಿಕರು ಸಮಾಜದ ಬೆನ್ನೆಲುಬಾಗಿದ್ದಾರೆ. ಅವರ ಕ್ಷೇಮಾಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಹೊಸಪೇಟೆ ನಗರದಲ್ಲಿ ಕಟ್ಟಡ ಕಾರ್ಮಿಕರ ಭವನ ನಿರ್ಮಿಸಲು ಅಗತ್ಯವಿರುವ ಅನುದಾನವನ್ನು ಬಿಡುಗಡೆಗೊಳಿಸಿ, ಶೀಘ್ರದಲ್ಲೇ ಭವನ ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಹೊಸಪೇಟೆ ತಾಲೂಕು ಕಟ್ಟಡ ಕಾರ್ಮಿಕರ ಸಂಘದ ಗೌರವ ಅಧ್ಯಕ್ಷರಾದ ಜಿ.ಮೋಹನ್, ಅಧ್ಯಕ್ಷರಾದ ಮೌಲಾ ಸಹೇಬ್, ಪ್ರಧಾನ ಕಾರ್ಯದರ್ಶಿಗಳಾದ ಸೋಮಶೇಖರ್ ಬಣ್ಣದಮನೆ, ಖಜಾಂಚಿಗಳಾದ ಬಸವರಾಜ್, ಮುಖಂಡರಾದ ಧರ್ಮಪ್ಪ, ಸಿ.ಎಸ್.ಮಣಿ, ತಿರುಮಲ, ಸುಬ್ರಮಣ್ಯ, ಬಾಲರಾಜ್, ಶಾಷು, ನಾಗರಾಜ್, ಅಹಮದ್, ಮಾರಿಮುತ್ತು, ಜೈರುದ್ಧಿನ್, ಗೀರೀಶ್ ಸೇರಿದಂತೆ ಇನ್ನು ಅನೆಕ ಪದಾಧಿಕಾರಿಗಳು ಹಾಗೂ ಪ್ರಮುಖ ಮುಖಂಡರು ಉಪಸ್ಥಿತರಿದ್ದರು. ಈ ವರದಿಯನ್ನು ತಮ್ಮ ಪತ್ರಿಕೆಯಲ್ಲಿ ಪ್ರಕಟಗೊಳಿಸಬೇಕೆಂದು ಕೋರಲಾಗಿದೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 