ನೌಕರರ ವೇದಿಕೆಯಿಂದ ಸಚಿವ ಸಂತೋಷ ಲಾಡ್ ಅವರಿಗೆ ಮನವಿ
ನೌಕರರ ವೇದಿಕೆಯಿಂದ ಸಚಿವ ಸಂತೋಷ ಲಾಡ್ ಅವರಿಗೆ ಮನವಿ
ಧಾರವಾಡ. 23: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ವೇದಿಕೆಯಿಂದ ನಿನ್ನೆ (ಅ.22) ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ ಸರ್ಕಾರಿ ನೌಕರರ ಬೇಡಿಕೆಗಳ ಈಡೇರಿಸುವಂತೆ ಮನವಿಯನ್ನು ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲೆ ಅಧ್ಯಕ್ಷ ಎಸ್ ಎಸ್. ಸಿದ್ದನಗೌಡರ, ಜಿಲ್ಲೆಯ ನಿವೃತ್ತ ನೌಕರ ಸಂಘದ ಸದಸ್ಯರು ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳ ನಿವೃತ್ತ ಸರ್ಕಾರಿ ನೌಕರರಿಂದ ಮನವಿ ಸಲ್ಲಿಸಲಾಗಿದೆ. ಈ ಸಂದರ್ಭದಲ್ಲಿ ನಿವೃತ್ತ ಸರಕಾರಿ ನೌಕರ ಸಂಘದ ಸದಸ್ಯರು ಭಾಗವಹಿಸಿದ್ದರು.