ರೈತರ ವಿವಿಧ ಸಮಸ್ಯೆಗಳ ಇತ್ಯರ್ಥಕ್ಕೆ ಆಗ್ರಹಿಸಿ ತಹಶೀಲ್ದಾರರಿಗೆ ಮನವಿ
Appeal to Tahsildars demanding resolution of various problems of farmers
ಲೋಕದರ್ಶನ ವರದಿ
ಮುಂಡಗೋಡ 28 : ತಾಲೂಕಿನ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಬೇಕೆಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ತಾಲೂಕು ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಹಾಗೂ ಕೃಷಿ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು. ಬೆಳೆ ವಿಮೆ ಪಾವತಿ: 2025ರ ಮುಂಗಾರು ಹಂಗಾಮಿನಲ್ಲಿ ಗೋವಿನ ಜೋಳದ ಬೆಳೆ ಸಂಪೂರ್ಣ ನಷ್ಟವಾಗಿದ್ದು, ವಿಮಾ ಕಂಪನಿಗಳಿಂದ ತಕ್ಷಣವೇ ಬೆಳೆ ವಿಮೆ ಪರಿಹಾರ ಕೊಡಿಸಬೇಕು.
ರಸಗೊಬ್ಬರ ಕಪ್ಪು ಮಾರುಕಟ್ಟೆ ತಡೆ: ಮಾರುಕಟ್ಟೆಯಲ್ಲಿ ಡಿ.ಎ.ಪಿ (ಆಂಕ) ಗೊಬ್ಬರದ ಕೃತಕ ಅಭಾವ ಸೃಷ್ಟಿಸಿ, ಅದರೊಂದಿಗೆ ಬೇಡದ ಓಷಧಿಗಳನ್ನು ಕಡ್ಡಾಯವಾಗಿ ಖರೀದಿಸುವಂತೆ (ಲಿಂಕ್ ಸೇಲ್) ಒತ್ತಾಯಿಸುತ್ತಿರುವ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.ಡೀಸೆಲ್ ಪೂರೈಕೆ: ಬಿತ್ತನೆ ಕಾರ್ಯಕ್ಕಾಗಿ ರೈತರು ತರುವ ಕ್ಯಾನ್ಗಳಿಗೆ ಮುಕ್ತವಾಗಿ ಡೀಸೆಲ್ ನೀಡುವಂತೆ ಬಂಕ್ ಮಾಲೀಕರಿಗೆ ಸೂಚಿಸಬೇಕು.
ಕಮರ್ಷಿಯಲ್ ಸಿಲಿಂಡರ್ ಅಭಾವ: ವಾಣಿಜ್ಯ ಗ್ಯಾಸ್ ಸಿಲಿಂಡರ್ಗಳ ಕೊರತೆಯಿಂದ ಹೋಟೆಲ್ ಉದ್ಯಮ ಸಂಕಷ್ಟದಲ್ಲಿದ್ದು, ಸಕಾಲಕ್ಕೆ ಸಿಲಿಂಡರ್ ಪೂರೈಸಲು ಏಜೆನ್ಸಿಗಳಿಗೆ ಆದೇಶಿಸಬೇಕು. ಈ ಸಂದರ್ಭದಲ್ಲಿ ಹಸಿರು ಸೇನೆಯ ತಾಲೂಕಾ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 