ಸರ್ಕಾರಿ ಶಾಲೆಗಳ ಉನ್ನತಿಕರಣಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಮನವಿ
Appeal to Union Minister H.D. Kumaraswamy for the upgradation of government schools
ಕಂಪ್ಲಿ 06: ತಾಲ್ಲೂಕಿನ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಎನ್ಎಂಡಿಯ ಸಿಎಸ್ಆರ್ ನಿಧಿಯಲ್ಲಿ ಹಣವನ್ನು ಒದಗಿಸಲು ಶಿಫಾರಸ್ಸು ಮಾಡುವಂತೆ ಆಗ್ರಹಿಸಿ, ಕಂಪ್ಲಿಯ ಜೆಡಿಎಸ್ ಮುಖಂಡರಾ ಉಳೇನೂರು ಶಬ್ಬೀರ್ ಬೆಂಗಳೂರಿನಲ್ಲಿ ಕೇಂದ್ರ ಕೈಗಾರಿಕಾ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಮನವಿ ಸಲ್ಲಿಸಿದ ನಂತರ ಮಾತನಾಡಿದ ಉಳೇನೂರು ಶಬ್ಬೀರ್ ಸಂಡೂರು ತಾಲ್ಲೂಕಿನ ದೋಣಿಮಲೆ ಎನ್ಎಂಡಿಸಿ ಸಂಸ್ಥೆಯ ಸಿಎಸ್ಆರ್ (ಸಾಮಾಜಿಕ ಹೊಣೆಗಾರಿಕೆ) ನಿಧಿಯಲ್ಲಿ ಕಂಪ್ಲಿ, ಹೊಸಪೇಟೆ, ಹಗರಿಬೊಮ್ಮನಹಳ್ಳಿ ತಾಲ್ಲೂಕುಗಳ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕಾಗಿ ಪ್ರತಿ ತಾಲ್ಲೂಕಿಗೆ 5ಕೋಟಿ ರೂಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಎನ್ಎಂಡಿಗೆ ಶಿಫಾರಸ್ಸು ಮಾಡುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿಯವರು ಈ ಬಗ್ಗೆ ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮುಖಂಡರಾದ ಮಹ್ಮದ್ ಜಾಕೀರ್, ವಿನೋದ್, ಆಮ್ಜದ್ ಸೇರಿದಂತೆ ಇತರರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 