ಸಮಾವೇಶ ಯಶಶ್ವಿಗೆ ಮನವಿ
ಮೂಡಲಗಿ 19: ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮಿಜಿ ಹಾಗೂ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ನೇತೃತ್ವದಲ್ಲಿ ಪೆ. 21ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ 2ಎ ಮೀಸಲಾತಿಗಾಗಿ ಜರುಗಲಿರುವ ಹಕ್ಕೊತ್ತಾಯ ಸಮಾವೇಶದಲ್ಲಿ ಸರಕಾರದ ಮೇಲೆ ಒತ್ತಡ ಹೇರಲು ನಾಡಿನ ಪಂಚಮಸಾಲಿ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಪಂಚಮಸಾಲಿ ಯುವ ಮುಖಂಡ ಹೊಳೆಪ್ಪ ಶಿವಾಪೂರ ತಿಳಿಸಿದ್ದಾರೆ.