ಕೆಪಿಎಸ್ ಶಾಲೆಗೆ ಗುಳೇದಕೊಪ್ಪ ಶಾಲೆಯನ್ನು ವೀಲೀನಗೊಳಿಸದಂತೆ ಆಗ್ರಹಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಡಿಡಿಪಿಐ ಅಧಿಕಾರಿಗಳಿಗೆ ಮನವಿ

ಕೆಪಿಎಸ್ ಶಾಲೆಗೆ  ಗುಳೇದಕೊಪ್ಪ ಶಾಲೆಯನ್ನು ವೀಲೀನಗೊಳಿಸದಂತೆ  ಆಗ್ರಹಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಡಿಡಿಪಿಐ ಅಧಿಕಾರಿಗಳಿಗೆ ಮನವಿ Appeal to field education officers and DDPI officials not to merge Guledakoppa School with KPS Schoo

ಲೋಕದರ್ಶನ ವರದಿ 

ಧಾರವಾಡ 30 : ಗುಳೇದಕೊಪ್ಪ ಗ್ರಾಮದ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ವೀಲೀನಗೊಳಿಸಿದಂತೆ ಆಗ್ರಹಿಸಿ ಎಐಡಿಎಸ್‌ಒ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯಿಂದ ಡಿಡಿಪಿಐ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಡಿಡಿಪಿಐ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ಸರ್ಕಾರವು ಬಜೆಟ್ ನಲ್ಲಿ ಘೋಷಿಸಿರುವಂತೆ  ಜೂನ್ ನಿಂದಲೇ ಹೊಸ ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಈ ಶಾಲೆಗಳ 3ರಿಂದ 5 ಕಿ.ಮೀ ವ್ಯಾಪ್ತಿಯ ಶಾಲೆಗಳನ್ನು ವೀಲೀನಗೊಳಿಸಲಾಗುವುದೆಂದು 15 ಅಕ್ಟೋಬರ್ 2025ರ ಆದೇಶವು ತಿಳಿಸುತ್ತದೆ. 

ನಮ್ಮೂರ ಶಾಲೆ ಉಳಿಯಬೇಕು ಮತ್ತು ಕೆಪಿಎಸ್ ಯೋಜನೆ ರದ್ದಾಗಬೇಕೆಂದು ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ರಚಿಸಿಕೊಂಡು ಕಳೆದ 5 ತಿಂಗಳಿಂದ ಗ್ರಾಮಸ್ಥರು ಹಾಗೂ ಪೋಷಕರು ಹೋರಾಟ ನಡೆಸಿದ್ದೇವೆ. ಗ್ರಾಮ ಮಟ್ಟದಿಂದ ಆರಂಭಿಸಿ ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದ ವರೆಗೂ ಪ್ರತಿಭಟನೆ ಹಾಗೂ ಸಮಾವೇಶಗಳನ್ನು ನಡೆಸಲಾಗಿದೆ. ನಾಡಿನ ಹೆಸರಾಂತ ಸಾಹಿತಿಗಳು ಹಾಗೂ ಶಿಕ್ಷಣ ತಜ್ಞರು ನಮ್ಮೊಂದಿಗೆ ಧ್ವನಿಗೂಡಿಸಿದ್ದಾರೆ. ನಮ್ಮೂರ ಶಾಲೆ ನಮ್ಮೂರ ಮಕ್ಕಳ ಜ್ಞಾನದ ಮಂದಿರವಾಗಿದೆ. ನಮ್ಮೂರ ಶಾಲೆಯನ್ನು ಮುಚ್ಚಲು/ವೀಲೀನಗೊಳಿಸಲು ನಮ್ಮ ಒಪ್ಪಿಗೆಯಿಲ್ಲ. 

ಅಷ್ಟೇ ಅಲ್ಲದೇ ಸರ್ಕಾರವು 1ನೇ ತರಗತಿಯಿಂದಲೇ ಕನ್ನಡ ಮಾಧ್ಯಮದೊಂದಿಗೆ ಇಂಗ್ಲಿಷ್ ಮಾಧ್ಯಮ ಕೂಡ ಆರಂಭಿಸುತ್ತಿದೆ. ಕೆಲವು ಕಡೆ ತಿಳಿದು ಬಂದಿರುವ ಮಾಹಿತಿಯಂತೆ, ದ್ವಿಭಾಷಾ ಮಾಧ್ಯಮದ ಹೆಸರಲ್ಲಿ ಕೇವಲ ಇಂಗ್ಲಿಷ್ ಮಾಧ್ಯಮ ಕಲಿಸಲು ತಯಾರಿ ನಡೆಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ತೆಗೆದುಹಾಕುವುದನ್ನು ಒಪ್ಪಲು ಸಾಧ್ಯವಿಲ್ಲ.  ಆದ್ದರಿಂದ ನಮ್ಮೂರ ಶಾಲೆಗೆ ಸಮರ​‍್ಕ ಸೌಲಭ್ಯ ಹಾಗೂ ಶಿಕ್ಷಕರನ್ನು ನೀಡಿ ಅಭಿವೃದ್ಧಿ ಪಡಿಸಬೇಕೆಂಬುದು ನಮ್ಮೆಲ್ಲರ ಒಕ್ಕೊರಲ ಆಗ್ರಹವಾಗಿದೆ. ಯಾವುದೇ ಕಾರಣಕ್ಕೂ ನಮ್ಮೂರ ಶಾಲೆ ಮುಚ್ಚಬಾರದೆಂದು ಮನವಿ ಪತ್ರ ನೀಡಿ ಆಗ್ರಹಿಸಲಾಯಿತು.