ಬೆಳಗಾವಿ

ಜೈವಿಕ ಮಗುವಿನ ಪಾಲಕರ ಪತ್ತೆಗಾಗಿ ಮನವಿ

ಜೈವಿಕ ಮಗುವಿನ ಪಾಲಕರ ಪತ್ತೆಗಾಗಿ ಮನವಿ

ಲೋಕದರ್ಶನ ವರದಿ 

ಬೆಳಗಾವಿ 10: ಸವದತ್ತಿ ತಾಲೂಕಿನ ಸುರೇಬಾನ ಸಮೀಪದ ಕಿತ್ತೂರ-ನರಗುಂದ ರಸ್ತೆಯ ಬಸವಣಕಟ್ಟೆ ಸೇತುವೆ ಕೆಳಭಾಗದಲ್ಲಿ ನವಜಾತ ಗಂಡು ಶಿಶುವನ್ನು ದಿನಾಂಕ 06.07.2026 ರಂದು ಯಾರೋ ಅಪರಿಚಿತರು ಬಿಟ್ಟು ಹೋಗಿದ್ದು, ಸ್ಥಳೀಯ ಗ್ರಾಮಸ್ಥರು ಗಮನಿಸಿ ಪೋಲಿಸರಿಗೆ ಮಾಹಿತಿಯನ್ನು ನೀಡಿರುತ್ತಾರೆ. ತಕ್ಷಣ ಪೋಲಿಸರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ಥಳಕ್ಕೆ ಭೇಟಿ ನೀಡಿ, ಮಗುವನ್ನು ರಕ್ಷಣೆ ಮಾಡಿ ಸವದತ್ತಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿರುತ್ತಾರೆ.  ಸದ್ಯ ಮಗುವಿನ ಆರೋಗ್ಯ ಸುಧಾರಣೆಯಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರಪಡಿಸಲಾಗಿತ್ತು. ಮಗುವನ್ನು ಮಕ್ಕಳ ಕಲ್ಯಾಣ ಸಮಿತಿ ಇವರು ತಾತ್ಕಾಲಿಕವಾಗಿ ರಕ್ಷಣೆ ಮತ್ತು ಪೋಷಣೆಗಾಗಿ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನ ದತ್ತು ಸ್ವೀಕಾರ ಕೇಂದ್ರ, ಬೆಳಗಾವಿಯಲ್ಲಿ ಅಭೀರಕ್ಷಣೆಗಾಗಿ ಇಡಲಾಗಿದೆ.  


ಸುದ್ದಿ ಓದಿ