ಬಳ್ಳಾರಿ

ಜಿಲ್ಲಾ ಆಸ್ಪತ್ರೆಗೆ ವೆಂಟಿಲೇಟರ್, ಅಕ್ಸಿಜನ್ ಸಿಲಿಂಡರ್‌ಗಳನ್ನು ಪೂರೈಸಲು ಮನವಿ

ಜಿಲ್ಲಾ ಆಸ್ಪತ್ರೆಗೆ ವೆಂಟಿಲೇಟರ್, ಅಕ್ಸಿಜನ್ ಸಿಲಿಂಡರ್‌ಗಳನ್ನು ಪೂರೈಸಲು ಮನವಿ

ಬಳ್ಳಾರಿ 24: ಬಳ್ಳಾರಿ ನಗರ ಘಟಕ ವತಿಯಿಂದ ಕೊರೊನ 3ನೇ ಅಲೆಗೆ ಸಿದ್ದತೆಗೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಜಿಲ್ಲಾ ಆಸ್ಪತ್ರೆಗೆ 100 ವೆಂಟಿಲೇಟರ್, 100 ಅಕ್ಸಿಜನ್ ಸಿಲಿಂಡರ್‌ಗಳನ್ನು ಪೂರೈಸಬೇಕೆಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ ಕಟೀಲ್ ರವರಿಗೆ ನಗರದ ಅಧ್ಯಕ್ಷ ಕೆ.ಬಿ.ವೆಂಕಟೇಶ್ವರ, ಪ್ರಧಾನ ಕಾರ್ಯದರ್ಶಿ ಮನವಿ ಪತ್ರ ಸಲ್ಲಿಸಲಾಯಿತು.  

ಬಳ್ಳಾರಿ ಸಂಸದ ವೈ ದೇವೇಂದ್ರ​‍್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ, ರಾಜ್ಯ ಸಂಘಟನಾ ಕಾರ್ಯದರ್ಶಿ  ಅರುಣ್ ಕುಮಾರ್, ವಿಭಾಗಿಯ ಉಸ್ತುವಾರಿ  ಸಿದ್ದೇಶ್ ಯಾದವ್, ವಿಭಾಗಿಯ ಸಂಘಟನಾ ಕಾರ್ಯದರ್ಶಿ ಪ್ರಮೋದ್, ಜಿಲ್ಲಾ ಅಧ್ಯಕ್ಷರಾದ ಚನ್ನಬಸವನಗೌಡ ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್ ನಾಯ್ಡು, ಮಾಜಿ ಶಾಸಕ ನೇಮಿರಾಜ್ ನಾಯ್ಕ, ಮುಖಂಡರಾದ ಗುರುಲಿಂಗನಗೌಡ, ರಾಮಲಿಂಗಪ್ಪ, ತಿಮ್ಮಾರೆಡ್ಡಿ, ಮುರಾರಿಗೌಡ, ಸುಬ್ಬರಾವ್, ರಾಮಕೃಷ್ಣ, ಏ.ಸುಂದರ, ಬುಡಾ ಅಧ್ಯಕ್ಷ ದಮ್ಮೂರು ಶೇಖರ್, ಮಾಜಿ ಪಾಲಿಕೆ ಸದಸ್ಯ ಮಲ್ಲನಗೌಡ, ನಗರ ಉಪಾಧ್ಯಕ್ಷ ಕೇದಾರ್‌ಸ್ವಾಮಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಓಂಪ್ರಕಾಶ ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಜರಿದ್ದರು. 


ಸುದ್ದಿ ಓದಿ