ಕುರುಬ ಸಮಾಜವನ್ನು ಎಸ್.ಟಿಗೆ ಸೇರಿಸಬಾರದು ಎಂದು ವಿರೋಧಿಸಿ ಮುಖ್ಯಮಂತ್ರಿಗಳಿಗೆ ಮನವಿ
Appeal to the Chief Minister opposing inclusion of the Kuruba community in the ST category
ಗದಗ 22: ಕುರುಬ ಸಮುದಾಯವನ್ನು ಯಾವುದೇ ಕಾರಣಕ್ಕೂ ಪರಿಶಿಷ್ಟ ಪಂಗಡ (ಎಸ್.ಟಿ)ಕ್ಕೆ ಸೇರಿಸಬಾರದು ಎಂದು ಆಗ್ರಹಿಸಿ, ಗದಗ ಜಿಲ್ಲಾ ವಾಲ್ಮೀಕಿ ನಾಯಕ ಸೇವಾ ಸಂಘ ಹಾಗೂ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಗದಗ ಜಿಲ್ಲಾ ಯುವ ಘಟಕದಿಂದ ಗದಗಿನ ಪ್ರವಾಸಿ ಮಂದಿರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.
‘ಪರಿಶಿಷ್ಟ ಪಂಗಡ ಸಮುದಾಯ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಹಾಗೂ ಓದ್ಯೋಗಿಕವಾಗಿ ಹಿಂದುಳಿದಿದೆ. ಆದರೆ, ಕುರುಬ ಸಮುದಾಯ ಎಲ್ಲ ಕ್ಷೇತ್ರಗಳಲ್ಲೂ ಸದೃಢವಾಗಿದೆ. ಹೀಗಿರುವಾಗ ಸದೃಢ ಸಮುದಾಯವನ್ನು ಹಿಂದುಳಿದ ಎಸ್.ಟಿ ಪಟ್ಟಿಗೆ ಸೇರಿಸುವುದು ಸಂವಿಧಾನ ವಿರೋಧವಾಗಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಅನ್ಯ ಸಮುದಾಯಗಳನ್ನು ಎಸ್ಟಿಗೆ ಸೇರಿಸಬಾರದು’ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ ಅಲ್ಲದೇ ‘ರಾಜ್ಯ ಸರ್ಕಾರದಿಂದ ಎಸ್.ಟಿ ಸಮುದಾಯಕ್ಕೆ ಸಮರ್ಕವಾಗಿ ಸೌಲಭ್ಯಗಳು ದೊರೆಯುತ್ತಿಲ್ಲ.
ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಬ್ರಹ್ಮಾಂಡ ಬ್ರಷ್ಟಾಚಾರದಿಂದ ನಮ್ಮ ಸಮುದಾಯ ಇನ್ನಷ್ಟು ಕುಗ್ಗಿ ಹೋಗಿದೆ. ಆದರೂ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನ್ಯ ಸಮುದಾಯಗಳನ್ನು ಎಸ್.ಟಿ.ಗೆ ಸೇರಿಸುವುದು ಸರಿಯಲ್ಲ. ಈ ನಿರ್ಧಾರ ಕೈ ಬಿಡಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ಕೈಗೆತ್ತಿಕೊಳ್ಳಲಾಗುವುದು’ ಎಂದು ಸಂಘಟಿಕರು ಮಾತನಾಡಿ ಮನವಿ ಪತ್ರ ನೀಡಿ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಕಾನೂನು ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಎಚ್ ಕೆ ಪಾಟೀಲ ಸಾಹೇಬರು ಹಾಗೂ ಗದಗ ಜಿಲ್ಲಾ ವಾಲ್ಮೀಕಿ ನಾಯಕ ಸೇವಾ ಸಂಘದ ಜಿಲ್ಲಾಧ್ಯಕ್ಷರಾದ ಬಸವರಾಜ ಮೈಲಾರ್ಪ ಬೆಳಧಡಿ. ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಗದಗ ಜಿಲ್ಲಾ ಯುವ ಘಟಕದ ಜಿಲ್ಲಾಧ್ಯಕ್ಷರಾದ ಅನಿಲಕುಮಾರ ಸಿದ್ದಮ್ಮನಹಳ್ಳಿ. ಗೋವಿಂದರಾಜ ಪನ್ನೂರು. ರೋಣ ತಾಲ್ಲೂಕ ಅಧ್ಯಕ್ಷರಾದ ಬಸವರಾಜ ತಳವಾರ. ಲಕ್ಷ್ಮೇಶ್ವರ ತಾಲ್ಲೂಕ ಅಧ್ಯಕ್ಷರಾದ ಭೀಮಪ್ಪ ಯಂಗಾಡಿ. ವಸಂತ ಸಿದ್ದಮ್ಮನಹಳ್ಳಿ. ವಸಂತ ವಾಲ್ಮೀಕಿ. ಶ್ರೀಕಾಂತ ಪೂಜಾರ. ಸೋಮು ಕೊರ್ಲವಾಡ. ಈಶ್ವರ ರೌಡೂರ. ಮಂಜುನಾಥ ವಾಲ್ಮೀಕಿ. ಗೀರೀಶ ಮುಕ್ಕಣ್ಣವರ. ಕೀರಣ ನಾಯ್ಕರ. ರಾಮು ಬಾಗಲಕೋಟಿ. ಮಾರುತಿ ಕಾತರಕಿ. ಮುಂಡರಗಿ ತಾಲ್ಲೂಕು ಸೇರಿದಂತೆ ಗದಗ ಜಿಲ್ಲೆಯ ಎಲ್ಲ ತಾಲ್ಲೂಕ ಅಧ್ಯಕ್ಷರು ಪದಾಧಿಕಾರಿಗಳು ಗುರು ಹಿರಿಯರು ಯುವಕರು ಹಾಗೂ ಇತರರು ಉಪಸ್ತಿತರಿದ್ದರು
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 