ಸ್ವಯಂ ಉದ್ಯೋಗ ಹೊಂದಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಆ.19:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2022-23ನೇ ಸಾಲಿನ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧೀಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ರಾಜ್ಯದ ಕ್ರೀಡಾಪಟುಗಳು ತಮ್ಮ ವಿವರಗಳನ್ನು ನಿಗಧಿತ ನಮೂನೆಯ ಅರ್ಜಿಯಲ್ಲಿ ಭರ್ತಿ ಮಾಡಿ, ಅರ್ಜಿಗಳನ್ನು ಆಯಾ ಜಿಲ್ಲೆಯ ತರಬೇತುದಾರರಿಗೆ ಸಲ್ಲಿಸಬೇಕು. ಕ್ರೀಡಾಪಟುಗಳು ಸಲ್ಲಿಸಿರುವ ಪ್ರಮಾಣ ಪತ್ರಗಳನ್ನು ಪರಿಶೀಲಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಮೊ.9972552385 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶೈಕ್ಷಣಿಕ ಶುಲ್ಕ ಮರುಪಾವತಿಸುವ ಯೋಜನೆಗೆ ಅರ್ಜಿ ಆಹ್ವಾನ
ಬಳ್ಳಾರಿ,ಆ.19:2022-23ನೇ ಸಾಲಿನ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿಸುವ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಅವರು ತಿಳಿಸಿದ್ದಾರೆ.
ಅರ್ಜಿಗಳನ್ನು ಇಲಾಖೆಯ ಮುಖಾಂತರ ಪಡೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಇದೇ ಕಚೇರಿಗೆ ಸೆ.09 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಮೊ.9972552385 ಗೆ ಸಂಪರ್ಕಿ ಸಬಹುದಾಗಿದೆ.
ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಆ.19:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2022-23ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಅಡಿಯಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಅಧಿಕೃತ ಕ್ರೀಡೆಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ನೀಡಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿನ ಅರ್ಹ ಕ್ರೀಡಾಪಟುಗಳು ಅರ್ಜಿಗಳನ್ನು ಅಧಿಕೃತ ದಾಖಲೆಗಳೊಂದಿಗೆ ಭರ್ತಿ ಮಾಡಿ, ಇದೇ ಕಚೇರಿಗೆ ಸಲ್ಲಿಸಲು ಸೆ.09 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಮೊ.9972552385 ಗೆ ಸಂಪರ್ಕಿ ಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಅವರು ತಿಳಿಸಿದ್ದಾರೆ.