ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮುಂಡಗೋಡ:2022-23ನೇ ಸಾಲಿನ ಕೃಷಿ ಇಲಾಖೆಯ ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಎಮ್.ಎಸ್.ಕುಲಕರ್ಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿದಾರರು ಸ್ವತಃ ಬೇಸಾಯದಲ್ಲಿ ತೊಡಗಿರುವ ಕ್ರಿಯಾಶೀಲ ಕೃಷಿಕನಾಗಿರಬೇಕು ಅಥವಾ ಸ್ವಂತ ಜಮೀನು ಹೊಂದಿರದಿದ್ದರೂ ಬೇಸಾಯದಲ್ಲಿ ತೊಡಗಿರುವ ಕೃಷಿಕನು ಜಮೀನು ಮಾಲೀಕರಿಂದ ಸಾಮಾನ್ಯ ವ್ಯವಹಾರಿಕ ಅಧಿಕಾರ ಹೊಂದಿದ್ದ ಪಕ್ಷದಲ್ಲಿ(ಭೂ ಸುಧಾರಣೆಯ ಕಾಯ್ದೆ ನಿಯಮಗಳಿಗೆ ಒಳಪಟ್ಟು) ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಮತ್ತು ಇತರೆ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆಯರಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಕನಿಷ್ಠ ವಿಸ್ತೀರ್ಣ 1ಎಕರೆ ಇರಬೇಕು. ಪಹಣಿ ಪತ್ರಿಕೆ, ಶುಲ್ಕ ಪಾವತಿಸಿದ್ದಕ್ಕೆ ಚಲನ್, ಪ.ಜಾ./ಪ.ಪಂ. ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ, ರೈತರ ಛಾಯಾಚಿತ್ರ ಇವುಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಎಲ್ಲಾ ಮಟ್ಟಗಳಿಗೂ (ರಾಜ್ಯ/ತಾಲೂಕು/ಜಿಲ್ಲಾ) ಅನ್ವಯಿಸುವಂತೆ ಪ.ಜಾ./ಪ.ಪಂ. ರೈತರಿಗೆ 25ರೂ. ಹಾಗೂ ಸಾಮಾನ್ಯ ವರ್ಗದ ರೈತರಿಗೆ 100ರೂ. ಪ್ರವೇಶ ಶುಲ್ಕ ನಿಗದಿ ಪಡಿಸಲಾಗಿದೆ. ತಾಲೂಕಿನಲ್ಲಿ ಒಟ್ಟು 15 ಕೃಷಿ ಪ್ರಶಸ್ತಿ ಅರ್ಜಿಗಳು ನೋಂದಾವಣೆ ಮಾಡಲು ಅವಕಾಶವಿದೆ. ಆಸಕ್ತ ರೈತರು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಅರ್ಜಿ ನಮೂನೆ ಪಡೆದು ಸೂಕ್ತ ದಾಖಲೆಗಳೊಂದಿಗೆ ಹಾಗೂ ಕ್ಷೇತ್ರ ಚಿತ್ರಗಳ ಸಹಿತ ಆ.31ರೊಳಗೆ ತಲುಪುವಂತೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಪಟ್ಟಣದ ಕೃಷಿ ಅಧಿಕಾರಿ ರೈತ ಸಂಪರ್ಕ ಕೇಂದ್ರ ಮೊ.ನಂ.8277933067, ರೈತ ಸಂಪರ್ಕ ಕೇಂದ್ರ ಪಾಳಾ ಮೊ.ನಂ.8277933066, ಪಟ್ಟಣದ ಆತ್ಮಾ ಯೋಜನೆಯ ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಮೊ.ನಂ.9686362842 ಮತ್ತು ಪಾಳಾ ಆತ್ಮಾ ಯೋಜನೆಯ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಮೊ.ನಂ.8748012202ಗೆ ಸಂಪರ್ಕಿಸಬೇಕು ಎಂದು ಅವರು ತಿಳಿಸಿದ್ದಾರೆ.