ಮುಂಡಗೋಡ ತೋಟಗಾರಿಕೆ ಯೋಜನೆಗಳಿಗೆ ರೈತರಿಂದ ಅರ್ಜಿ ಆಹ್ವಾನ
Applications invited from farmers for Mundagoda horticulture projects
ಲೋಕದರ್ಶನ ವರದಿ
ಮುಂಡಗೋಡ 29 : 2026-27 ನೇ ಸಾಲಿಗೆ ತೋಟಗಾರಿಕೆ ಇಲಾಖೆ ಮುಂಡಗೋಡದಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಿಗೆ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಕೃಷ್ಣಾ ಕುಳ್ಳೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕಂದು ಬಾಳೆ, ಅಂಗಾಂಶ ಬಾಳೆ, ಹೈಬ್ರಿಡ್ ತರಕಾರಿ, ಕಾಳುಮೆಣಸು, ಶುಂಠಿ, ಬಿಡಿ ಹೂವುಗಳು, ಪಪಾಯಾ ಹಾಗೂ ಹಣ್ಣು ಬೆಳೆಗಳ ಪ್ರದೇಶ ವಿಸ್ತರಣೆ, ಪುನಶ್ಚೇತನ, ತೋಟಗಾರಿಕೆ ಬೆಳೆಗಳಿಗೆ ಪ್ಲಾಸ್ಟಿಕ್ ಹೊದಿಕೆ ಅಳವಡಿಕೆ, ತೋಟದಲ್ಲಿ ಕಳೆ ನಿಯಂತ್ರಣಕ್ಕಾಗಿ ವೀಡ್ ಮ್ಯಾಟ್, ನೀರು ಸಂಗ್ರಹಣಾ ಘಟಕ, ಪ್ರಾಥಮಿಕ ಸಂಸ್ಕರಣಾ ಘಟಕ ಹಾಗೂ 20 ಹೆಚ್ಪಿ ಗಿಂತ ಕಡಿಮೆ ಸಾಮರ್ಥ್ಯದ ಮಿನಿ ಟ್ರಾಕ್ಟರ್ ಖರೀದಿಗೆ ಸಹಾಯಧನ ನೀಡಲಾಗುತ್ತದೆ. ಯೋಜನೆಯಡಿ ತೋಟಗಾರಿಕೆ ಯಂತ್ರೋಪಕರಣಗಳ ಖರೀದಿಗೆ ಸಹಾಯಧನ ದೊರೆಯಲಿದೆ. ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೂ ಅನುದಾನ ನೀಡಲಾಗುತ್ತದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಘಟಕ ಅಳವಡಿಸಲು ಶೇ. 90ರಷ್ಟು ಸಹಾಯಧನ ಲಭ್ಯವಿದೆ. ಇದಲ್ಲದೆ, ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ಹಿ ತಾಳೆ ಬೆಳೆ ಯೋಜನೆಯಡಿ ತಾಳೆ ಬೆಳೆ ಬೆಳೆಯಲು ಸಹಾಯಧನ ನೀಡಲಾಗುತ್ತದೆ.
ಧರ್ತಿ ಅಭಾ ಯೋಜನೆಯಡಿ (ಪ.ಪಂಗಡ ವರ್ಗದ ಪಟ್ಟಾ ಜಮೀನು ಹೊಂದಿದವರಿಗೆ ಮಾತ್ರ) ತರಕಾರಿ ಪ್ರದೇಶ ವಿಸ್ತರಣೆ, ನೀರು ಸಂಗ್ರಹಣಾ ಘಟಕ ನಿರ್ಮಾಣ, ಜೇನು ಪೆಟ್ಟಿಗೆ ಮತ್ತು ಜೇನುತುಪ್ಪ ತೆಗೆಯುವ ಯಂತ್ರೋಪಕರಣಗಳ ಖರೀದಿಗೆ ಸಹಾಯಧನ ದೊರೆಯುತ್ತದೆ. ರಾಜ್ಯ ವಲಯ ಯೋಜನೆಯಡಿ ಜೇನುಹುಳು ಸಾಕಾಣಿಕೆ ಹಾಗೂ ಜೇನು ಪೆಟ್ಟಿಗೆ ಖರೀದಿಗೂ ಅನುದಾನ ನೀಡಲಾಗುತ್ತದೆ. ಈ ಎಲ್ಲಾ ಯೋಜನೆಗಳಿಗೆ ಪ.ಜಾತಿ ಹಾಗೂ ಪ.ಪಂಗಡ ಸೇರಿ ಎಲ್ಲ ವರ್ಗದ ರೈತರಿಗೆ ಸಹಾಯಧನ ಪಡೆಯುವ ಅವಕಾಶವಿದೆ. ಆಸಕ್ತ ರೈತರು ಮುಂಡಗೋಡ ತೋಟಗಾರಿಕೆ ಇಲಾಖೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಜೇಷ್ಠತೆ, ಅನುದಾನ ಲಭ್ಯತೆ ಹಾಗೂ ಮಾರ್ಗಸೂಚಿಗಳ ಅನ್ವಯ ಈ ವರ್ಷ ಕಾರ್ಯಾದೇಶಗಳನ್ನು ನೀಡಲಾಗುವುದು. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮೇ 15, 2026 ಆಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿತ ಗ್ರಾಮ ಪಂಚಾಯಿತಿಗಳ ಕೃಷಿ ಸಖಿಯರನ್ನು ಸಂಪರ್ಕಿಸಬಹುದು. ಘಟಕಗಳ ಕಾಮಗಾರಿ ಪೂರ್ಣಗೊಂಡ ನಂತರ ಸಹಾಯಧನ ನೀಡಲಾಗುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 