ಗ್ಯಾರಂಟಿ ಯೋಜನೆಗಳ ಸದಸ್ಯರಾಗಿ ನೇಮಕ

ಮಹಾಲಿಂಗಪುರ 01: ರಬಕವಿ-ಬನಹಟ್ಟಿ ತಾಲೂಕು ಗ್ರಾರಂಟಿ ಯೋಜನೆಗಳ ಅನುಷ್ಠಾನ ಸಮೀತಿಗೆ ನೇಮಕಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಶಕ್ತಿ, ಗ್ರಹಲಕ್ಷ್ಮೀ, ಗ್ರಹಜ್ಯೋತಿ, ಅನ್ನಭಾಗ್ಯ, ಯುವಶಕ್ತಿ ಈ ಪಂಚ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಜಿಲ್ಲೆ, ತಾಲೂಕು ಮಟ್ಟದಲ್ಲಿ ಅನುಷ್ಠಾನ ಸಮೀತಿ ರಚಿಸಲಾಗಿದ್ದು ಜಿಲ್ಲಾ ಉಸ್ತುವಾರಿ ಸಚಿವ ಆರ್. ಬಿ. ತಿಮ್ಮಾಪೂರ, ವಿಧಾನ ಪರಿಷತ್ ಸದಸ್ಯರಾದ ಉಮಾಶ್ರೀ, ಧುರೀಣ ಸಿದ್ದು ಕೊಣ್ಣೂರ ಸಿಫಾರಸ್ಸಿನ ಮೇರೆಗೆ ಸ್ಥಳೀಯ ಕಾಂಗ್ರೆಸ್ ಧುರೀಣರಾದ ಶಂಕರ ಹಿಪ್ಪರಗಿ, ಪ್ರವೀಣ ಪೂಜಾರಿ, ಹಾಗೂ ರವಿ ದೊಡವಾಡ ಅವರನ್ನು ರಬಕವಿ-ಬನಹಟ್ಟಿ ತಾಲೂಕು ಗ್ರಾರಂಟಿ ಯೋಜನೆಗಳ ಅನುಷ್ಠಾನ ಸಮೀತಿಗೆ ಸದಸ್ಯರನ್ನಾಗಿ ನೇಮಕಗೊಳಿಸಿ ಆದೇಶ ನೀಡಿದೆ.