ಕರೋನ, ಹೊಸ ಜಿಲ್ಲೆಗಳಿಗೆ ಇಂದೇ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ : ಸಿಎಂ
ಬೆಂಗಳೂರು, ಎ 9, ರಾಜ್ಯದಲ್ಲಿ ಮಾರಕ ಕೊರೊನಾ ನಿಯಂತ್ರಣ ಮತ್ತು ಜಿಲ್ಲಾ ಉಸ್ತುವಾರಿಗಾಗಿ, ಈವರೆಗೆ ಉಸ್ತುವಾರಿ ಇಲ್ಲದ ಎಲ್ಲ ಜಿಲ್ಲೆಗಳಿಗೆ ಇಂದೇ ಸಚಿವರನ್ನು ನೇಮಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಿದ್ದಾರೆಂದು ತಿಳಿಸಿದರು. ಇಂದು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಅವರು ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜತೆ ಚರ್ಚೆ ಮಾಡಲಾಗಿದೆ ಎಂದರು.
ರೈತರಿಗೆ ಯಾವುದೇ ತೊಂದರೆಯಾಗದಂತೆ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಎಚ್ಚರ ವಹಿಸಲಾಗಿದೆ. ಮಳೆ ಆರಂಭವಾಗಿರುವುದರಿಂದ ರೈತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ಯಾರೊಬ್ಬರೂ ಸಹ ಹಸಿವಿನಿಂದಿರಬಾರದು. ಈ ನಿಟ್ಟಿನಲ್ಲಿ ಎಲ್ಲ ಕ್ರಮ ತೆಗೆದುಕೊಳ್ಳಲಾಗಿದೆ . ಇದರೊಂದಿಗೆ ಉಸ್ತುವಾರಿ ಸಚಿವರಿಲ್ಲದ ಜಿಲ್ಲೆಗಳಿಗೆ ಇಂದೆ ಸಂಜೆಯೊಳಗೆ ಸಚಿವರನ್ನು ನೇಮಿಸಲಾಗುತ್ತದೆ. ಈ ಕುರಿತು ಪಟ್ಟಿ ಸಿದ್ದಪಡಿಸಲಾಗುತ್ತಿದೆ ಎಂದರು ಇನ್ನು ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದ್ದು, ಬೆಂಗಳೂರಿನಲ್ಲಿ ಲಾಕ್ ಡೌನ್ ಉಲ್ಲಂಘಿಸಿದ 10 ಸಾವಿರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜನತೆ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಕಠಿಣ ತೀರ್ಮಾನ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದೂ ಸಿಎಂ ಎಚ್ಚರಿಕೆ ನೀಡಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 