ತಾಳಿಕೋಟಿ

ಕಾರ್ಯಾಧ್ಯಕ್ಷರಾಗಿ ಜಾಕೀರ ಹುಸೇನ ನೇಮಕ

ಕಾರ್ಯಾಧ್ಯಕ್ಷರಾಗಿ ಜಾಕೀರ ಹುಸೇನ ನೇಮಕ

ತಾಳಿಕೋಟಿ ಜೆಡಿಎಸ್ ಪಕ್ಷದ ಕ್ರಿಯಾಶೀಲ ಕಾರ್ಯಕರ್ತ ಜಾಕೀರಹುಸೇನ ಉಸ್ಮಾನಸಾಬ ಲಾಹೋರಿ ಇವರನ್ನು ವಿಜಯಪುರ ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತರ ವಿಭಾಗಕ್ಕೆ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಈ ಮೊದಲು ತಾಳಿಕೋಟಿ ತಾಲೂಕಾ ಸಂಘಟನಾ ಕಾರ್ಯದರ್ಶಿ ಯಾಗಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಹಿನ್ನಲೆಯಲ್ಲಿ ಅವರನ್ನು ಇದೀಗ ಜಿಲ್ಲಾ ಅಲ್ಪಸಂಖ್ಯಾತರ ವಿಭಾಗಕ್ಕೆ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಎಂದು ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಯಾಕೂಬ. ಎಮ್. ಕೋಪದ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

ಇದು ಚುನಾವಣಾ ಪರ್ವ ಆಗಿರುವುದರಿಂದ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರನ್ನು ಪಕ್ಷದೆಡೆಗೆ ತರಲು ಹಾಗೂ ಅಲ್ಪಸಂಖ್ಯಾತ ವಿಭಾಗವನ್ನು ಇನ್ನಷ್ಟು ಬಲಗೊಳಿಸಲು ಶಕ್ತಿ ಮೀರಿ ಪ್ರಯತ್ನಿಸಬೇಕೆಂದು ಹಾಗೂ ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡಲು ಈಗಿನಿಂದಲೇ ಕಾರ್ಯೋನ್ಮುಖರಾಗುವಂತೆ ಆದೇಶೀಸಲಾಗಿದೆ. 

ಅಭಿನಂದನೆ: ತಮ್ಮನ್ನು ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲು ಸಹಕರಿಸಿದ ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಯಾಕೂಬ. ಎಮ್. ಕೋಪದ ರಾಜ್ಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಮ್ಸದುಲ್ಲಾಹಖಾನ್ ಹಾಗೂ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹೀಂರನ್ನು ಜಾಕೀರಹುಸೇನ ಅಭಿನಂದಿಸಿದ್ದಾರೆ.

ಸುದ್ದಿ ಓದಿ