ಜೆಡಿಎಸ್ ಎಸ್ಟಿ ಮೋರ್ಚಾಗೆ ನೇಮಕ
ಬಳ್ಳಾರಿ 10: ಜೆಡಿಎಸ್ ಎಸ್ಟಿ ಮೋರ್ಚಾ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಮೀನಳ್ಳಿ ಡಿ.ತಾಯಣ್ಣ ಅವರನ್ನು ಕಲ್ಯಾಣ ಕರ್ನಾಟಕ ಭಾಗದ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮೀ ಅವರು ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರು ನಗರದ ಜೆಡಿಎಸ್ ಕಚೇರಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹಾಗೂ ಕರ್ನಾಟಕ ಜನತಾದಳ (ಜಾತ್ಯಾತೀತ) ಶಾಸಕಗಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮೀ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ಸಂಘಟನೆಗೆ ಕುರಿತು ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ವೀಕ್ಷಕರಾದ ಮೀನಳ್ಳಿ ಡಿ.ತಾಯಣ್ಣ ಅವರು ಮಾತನಾಡಿ, ಪಕ್ಷದಲ್ಲಿ ಕಳೆದ ಸುಮಾರು ವರ್ಷಗಳಿಂದ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ನನ್ನನ್ನು ಗುರುತಿಸಿ ಈ ಉನ್ನತ ಸ್ಥಾನ ಹಾಗೂ ಜವಾಬ್ದಾರಿಯನ್ನು ನೀಡಿದ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮೀ ಹಾಗೂ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮೀ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವೆ. ಅವರ ನಿರೀಕ್ಷೆಯಂತೆ ಪಕ್ಷ ಸಂಘಟನೆಗೆ ಪ್ರಾಮಾಣಿಕವಾಗಿ, ಸಮರ್ಥವಾಗಿ ಕಾರ್ಯ ನಿರ್ವಹಿಸುವೆ ಎಂದು ತಿಳಿಸಿದ್ದಾರೆ.