ಮೂಡಲಗಿ

ಮಾರ್ಗ ಸೂಚಿ ಉಲ್ಲಂಘಿಸಿದವರರ ವಿರುದ್ಧ ಸೂಕ್ತ ಕ್ರಮ

ಮಾರ್ಗ ಸೂಚಿ ಉಲ್ಲಂಘಿಸಿದವರರ ವಿರುದ್ಧ ಸೂಕ್ತ ಕ್ರಮ

ಮೂಡಲಗಿ 31: ವ್ಯಾಪಕವಾಗಿ ಹರಡುತ್ತಿರುವ  ರೂಪಾಂತರಿ ಕೊರೋನಾ  ನಿಯಂತ್ರಣಕ್ಕಾಗಿ ಪಟ್ಟಣ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು ಸರಕಾರದ ಮಾರ್ಗ ಸೂಚಿ ಉಲ್ಲಂಘಿಸಿದವರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ  ಎಚ್ಚರಿಕೆ ನೀಡಿದರು.

ಮಂಗಳವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಕೊರೋನಾ ನಿಯಂತ್ರಣಕ್ಕಾಗಿ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ ಧರಿಸಬೇಕು, ಸಾಮಾಜಿಕ ಅಂತರದ ಕಾಯ್ದುಕೊಳ್ಳವುದು ಕೂಡ ಅಷ್ಟೇ ಮುಖ್ಯವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮಾರ್ಗ ಸೂಚಿ ಸರಿಯಾಗಿ ಅನುಸರಿಸದಿದ್ದರೆ ಭಾರಿ ಪ್ರಮಾಣದ ದಂಡ ವಿಧಿಸಲಾಗುವುದು ಆದ್ದರಿಂದ ಸಾರ್ವಜನಿಕರು ಮುಂಜಾಗೃತೆ ವಹಿಸುವುದರ ಜೊತೆಗೆ ಸಹಕಾರ ನೀಡುವಂತೆ ತಿಳಿಸಿದರು. ಹಾಗೂ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ನೀತಿ ಸಂಹಿತೆ ಇರುವುದರಿಂದ ಯಾವುದೇ ಸಭೆ ಸಮಾರಂಭಗಳನ್ನು ನಡೆಸಲು ಅವಕಾಶವಿರುವುದಿಲ್ಲ ಎಂದು ತಿಳಿಸಿದರು.

ಸುದ್ದಿ ಓದಿ