ಸಿಂಧಗಿ

ರೈತರ ವಿವಿಧ ಬೇಡಿಕೆಗಳನ್ನು ಪರಿಗಣಿಸಿ ಸೂಕ್ತ ಪರಿಹಾರ ಕಲ್ಪಿಸಬೇಕು : ಅಂಬಿಕಾ ಪಾಟೀಲ

ರೈತರ ವಿವಿಧ ಬೇಡಿಕೆಗಳನ್ನು ಪರಿಗಣಿಸಿ ಸೂಕ್ತ ಪರಿಹಾರ ಕಲ್ಪಿಸಬೇಕು :  ಅಂಬಿಕಾ ಪಾಟೀಲ
Appropriate solutions must be provided by considering the various demands of the farmers: Ambika Pat

ಸಿಂದಗಿ 23:  ಸತತ ಬರಗಾಲದ ಹಣೆಪಟ್ಟಿಗೆ ಹೆಸರಾಗಿರುವ ವಿಜಯಪುರ ಜಿಲ್ಲೆ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿ ಸಾಧಿಸಲು ಸಂವಿಧಾನದ 98ನೇ ತಿದ್ದುಪಡಿ 371(ಜೆ) ವಿಶೇಷ ಸ್ಥಾನಮಾನ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯನ್ನು 371(ಜೆ) ವ್ಯಾಪ್ತಿಗೆ ಒಳಪಡಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಬಿಸಿಲು ನಾಡಿನ ಹಸೀರು ಸೇನೆಯ ಅಂಬಿಕಾ ಪಾಟೀಲ ಅವರು ಆಗ್ರಹಿಸಿದ್ದಾರೆ. 

       ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ರಾಜ್ಯದಲ್ಲಿ ಸಂಕಷ್ಟದಲ್ಲಿರುವ ರೈತರ ವಿವಿಧ ಬೇಡಿಕೆಗಳನ್ನು ಪರಿಗಣಿಸಿ ಸೂಕ್ತ ಪರಿಹಾರ ಕಲ್ಪಿಸಬೇಕು. ಸ್ಥಗಿತಗೊಂಡಿರುವ ಪಿಂಚಣಿ ಯೋಜನೆಗಳನ್ನು ಪುನರಾರಂಭಿಸಿ ಗ್ರಾಮೀಣ ಭಾಗದ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರಕುವಂತೆ ಮಾಡಬೇಕು. ಜಿಲ್ಲೆಯ ಸವಾಂರ್ಗೀಣ ಅಭಿವೃದ್ಧಿ ಹಾಗೂ ಗ್ರಾಮೀಣ ಜನರ ಹಿತದೃಷ್ಟಿಯಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 


ಸುದ್ದಿ ಓದಿ