ಯುಎಪಿಎ ತಿದ್ದುಪಡಿ ಮಸೂದೆಗೆ ಅಂಗೀಕಾರ
ನವದೆಹಲಿ 2: ಸಮಾಜದಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಸುವ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಘೋಷಿಸಿ ಆತನ ಆಸ್ತಿಯನ್ನು ಮುಟ್ಟುಗೋಲು ಹಾಕುವುದಕ್ಕೆ ಅವಕಾಶ ಮಾಡಿಕೊಡುವ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2019ಕ್ಕೆ(ಯುಎಪಿಎ) ರಾಜ್ಯಸಭೆಯಲ್ಲಿ ಅನುಮೋದನೆ ಸಿಕ್ಕಿದೆ.
ಶುಕ್ರವಾರ ರಾಜ್ಯಸಭೆ ಕಲಾಪ ಆರಂಭಗೊಂಡ ಕೆಲ ಹೊತ್ತಿನ ಬಳಿಕ ಮಸೂದೆ ಪರ-ವಿರೋಧವಾಗಿ ಮತ ಚಲಾವಣೆ ನಡೆಯಿತು. ಮಸೂದೆಯನ್ನು ಪರಿಶೀಲನೆಗೆ ಆಯ್ಕೆ ಸಮಿತಿಗೆ ಕಳುಹಿಸಬೇಕೆಂದು ವಿರೋಧ ಪಕ್ಷಗಳು ನಿಲುವಳಿ ಮಂಡಿಸಿದವು, ಇದಕ್ಕೆ ಸದನದಲ್ಲಿ ವಿರುದ್ಧವಾಗಿ 104 ಮತಗಳು ಮತ್ತು ಪರವಾಗಿ 85 ಮತಗಳು ಬಿದ್ದುದರಿಂದ ಆಯ್ಕೆ ಸಮಿತಿಗೆ ಹೋಗದೆ ರಾಜ್ಯಸಭೆಯಲ್ಲಿ ಅಂಗೀಕಾರವಾಯಿತು.
ಸಮಾಜದಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಸುವ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಘೋಷಿಸಲು ಸರ್ಕಾರಕ್ಕೆ ಬಲವನ್ನು ನೀಡುವ ಮಸೂದೆ ಇದಾಗಿದೆ. ವ್ಯಕ್ತಿಯೊಬ್ಬನನ್ನು ಭಯೋತ್ಪಾದಕ ಎಂದು ಹೇಗೆ ಪರಿಗಣಿಸುವುದು ಎಂದು ಮಸೂದೆಯಲ್ಲಿ ಸ್ಪಷ್ಟವಾಗಿ ನಮೂದಿಸಿಲ್ಲ, ಇದು ಕಠಿಣವಾಗಿದೆ, ಹೀಗಾಗಿ ಮಸೂದೆಯನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಯಿದೆ ಎಂದು ವಿರೋಧ ಪಕ್ಷಗಳು ಆರಂಭದಲ್ಲಿ ಸದನದಲ್ಲಿ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದವು.
1967ರ ಕಾನೂನು ಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ)ಕಾಯ್ದೆಗೆ ತಿದ್ದುಪಡಿ ಕೋರಿ ಲೋಕಸಭೆಯಲ್ಲಿ ಕಳೆದ ವಾರ ಮಂಡಿಸಲಾಗಿದ್ದ ಕಾನೂನುಬಾಹಿರ ಚಟುವಟಿಕೆಗಳು(ತಿದ್ದುಪಡಿ) ವಿಧೇಯಕ ಮಸೂದೆ 2019ಕ್ಕೆ ಧ್ವನಿಮತದ ಮೂಲಕ ಅಂಗೀ ಕಾರ ಸಿಕ್ಕಿತ್ತು. ಇಂದು ರಾಜ್ಯಸಭೆಯಲ್ಲಿ ಕೂಡ ಧ್ವನಿಮತದ ಮೂಲಕ ನಡೆದ ಪ್ರಕ್ರಿಯೆಯಲ್ಲಿ ಅಂಗೀಕಾರ ಸಿಕ್ಕಿದೆ.
ಇಂದು ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಪರ 147 ಮತಗಳು ಚಲಾವಣೆಯಾದರೆ ವಿರುದ್ಧವಾಗಿ ಕೇವಲ 42 ಮತಗಳು ಮಾತ್ರ ಬಿದ್ದವು. ಹೀಗಾಗಿ ಸುಗಮವಾಗಿ ಮೇಲ್ಮನೆಯಲ್ಲಿ ಕೂಡ ಅಂಗೀಕಾರವಾಯಿತು.
ಶುಕ್ರವಾರ ರಾಜ್ಯಸಭೆ ಕಲಾಪದಲ್ಲಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ, ಯುಎಪಿಎ ಮಸೂದೆ ಇರುವುದು ದೇಶದಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಟ ನಡೆಸುವುದಕ್ಕೆ ಹೊರತು ಬೇರೆ ಯಾವ ಉದ್ದೇಶಕ್ಕೆ ಕೂಡ ಅಲ್ಲ, ಭಯೋತ್ಪಾದಕ ಸಂಘಟನೆಯನ್ನು ಈಗಾಗಲೇ ನಿಷೇಧಿಸಿರುವಾಗ ಅದರ ಜೊತೆ ಗುರುತಿಸಿಕೊಂಡ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಏಕೆ ಹೆಸರಿಸಬೇಕು ಎಂದು ಕಾಂಗ್ರೆಸ್ ನಾಯಕ ಚಿದಂಬರಂ ಅವರು ಪ್ರಶ್ನಿಸಿದ್ದಾರೆ.
ನಾವು ಒಂದು ಸಂಘಟನೆಯನ್ನು ನಿಷೇಧಿಸಿದರೆ ಆ ಸಂಘಟನೆಯ ವ್ಯಕ್ತಿ ಇನ್ನೊಂದು ಭಯೋತ್ಪಾದಕ ಸಂಘಟನೆಯನ್ನು ಹುಟ್ಟುಹಾಕಬಹುದು. ನಾವು ಎಲ್ಲಿಯವರೆಗೆ ಭಯೋತ್ಪಾದಕ ಸಂಘಟನೆಯನ್ನು ನಿಷೇಧಿಸುತ್ತಾ ಹೋಗುವುದು ಹಾಗಾದರೆ ಎಂದು ಪ್ರಶ್ನಿಸಿದರು. ಈ ದೇಶದಲ್ಲಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಏನಾಯಿತು? ಎಲ್ಲಾ ಮಾಧ್ಯಮಗಳ ಮೇಲೆ ನಿಷೇಧ ಹೇರಲಾಗಿತ್ತು. ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಹಾಕಲಾಯಿತು. 19 ತಿಂಗಳ ಕಾಲ ಈ ದೇಶದಲ್ಲಿ ಪ್ರಜಾಪ್ರಭುತ್ವ ಇರಲಿಲ್ಲ, ವಿರೋಧ ಪಕ್ಷದ ನಾಯಕರಾದ ನೀವು ಇತಿಹಾಸವನ್ನೊಮ್ಮೆ ನೆನಪು ಮಾಡಿಕೊಳ್ಳಿ, ಇಂದು ಈ ಕಾಯ್ದೆ ಜಾರಿಗೆ ಬಂದರೆ ಕಾನೂನು ದುರುಪಯೋಗವಾಗುವ ಸಾಧ್ಯತೆಯಿದೆ ಎಂದು ಹೇಳುತ್ತೀರಿ ಎಂದು ಪ್ರತಿಪಕ್ಷ ಕಾಂಗ್ರೆಸ್ ನಾಯಕರಿಗೆ ಅಮಿತ್ ಶಾ ತಿರುಗೇಟು ನೀಡಿದರು.
ಸರ್ಕಾರದ ಉದ್ದೇಶಿತ ಮಸೂದೆ ಬಗ್ಗೆ ಸದನದಲ್ಲಿ ಇಂದು ಮಾತನಾಡಿದ ಸಿಪಿಎಂನ ಎಲಮರಮ್ ಕರೀಮ್, ಸರ್ಕಾರ ದೇಶೀಯ ಭಯೋತ್ಪಾದನೆಯನ್ನು ಹೇರಿಕೆ ಮಾಡುತ್ತಿದ್ದು ಭಿನ್ನ ನಿಲುವು ತಳೆದ ವ್ಯಕ್ತಿಗಳನ್ನು ಭಯೋತ್ಪಾದಕರೆಂದು ಘೋಷಿಸುವ ಸಾಧ್ಯತೆಯಿದ್ದು ಇದರಿಂದ ದೊಡ್ಡ ಮಟ್ಟದಲ್ಲಿ ವ್ಯಕ್ತಿಗಳ ಮೇಲೆ ಕಿರುಕುಳ ನೀಡುವ ಸಾಧ್ಯತೆಯಿರುತ್ತದೆ ಮತ್ತು ಅನ್ಯಾಯವಾಗಬಹುದು ಎಂದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 