ಏ.29 ರಿಂದ ಮೇ.16 ರವರೆಗೆ ದ್ವೀತಿಯ ಪಯುಸಿ ಪರೀಕ್ಷೆ-2: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ 27: ಕರ್ನಾಟಕ ಪರೀಕ್ಷಾ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ನಡೆಸಲಿರುವ 2024 ನೇ ಸಾಲಿನ ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆ- 2 ಕ್ಕೆ ಧಾರವಾಡ ಜಿಲ್ಲೆಯಲ್ಲಿ 12 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, 7039 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಶಾಲಾ ಶಿಕ್ಷಣದ ಪದವಿ ಪೂರ್ವ ಇಲಾಖೆಯ ಉಪನಿರ್ದೆಶಕ ಸುರೇಶ ಕೆ.ಪಿ., ಅವರು ಪರೀಕ್ಷೆಯನ್ನು ಸುಗಮವಾಗಿ ಮತ್ತು ನಿಯಮಾನುಸಾರ ನಡೆಸಲು ಅಗತ್ಯ ಸಿದ್ದತೆ ಮಾಡಿದ್ದಾರೆ.  

ಪರೀಕ್ಷೆಗೆ ಅಗತ್ಯವಿರುವ ಸಿಬ್ಬಂದಿ ಮತ್ತು ವಾಹನಗಳನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಧಾರವಾಡ ನಗರದಲ್ಲಿ 4, ಹುಬ್ಬಳ್ಳಿ ನಗರದಲ್ಲಿ 5, ಅಣ್ಣಿಗೇರಿ, ಕುಂದಗೋಳ ಮತ್ತು ಕಲಘಟಗಿಯಲ್ಲಿ ತಲಾ ಒಂದು ಪರೀಕ್ಷಾ ಕೇಂದ್ರಗಳು ಸೇರಿ ಒಟ್ಟು 12 ಸ್ಥಳಗಳಲ್ಲಿ ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿದೆ. ಸ್ಥಾನಿಕ ಜಾಗೃತ ದಳಗಳನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ ಮತ್ತು ಪ್ರತಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶ ವ್ಯಾಪ್ತಿಯಲ್ಲಿ ಜೆರಾಕ್ಸ್‌, ಕಂಪ್ಯೂಟರ್ ಅಂಗಡಿಗಳನ್ಬು ಪರೀಕ್ಷಾ ಸಮಯದಲ್ಲಿ ಬಂದ್ ಮಾಡಲು ಆದೇಶಿಸಿ, ನಿಷೇಧಾಜ್ಞೆ ಜಾರಿಗೊಳಿಸಿ, ಆದೇಶಿಸಲಾಗಿದೆ ಎಂದು ಜಿಲ್ಲಾದಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ